ದೇಶದ ಜನತೆಗೆ “ದೀಪಾವಳಿ ಶುಭಾಶಯ” ಕೋರಿದ ಪ್ರಧಾನಿ ಮೋದಿ, ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು

ದೀಪಾವಳಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ

ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ದೀಪಾವಳಿ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ಹಾರೈಸಿದ್ದಾರೆ.

ಇದೇ ವೇಳೆ ಪ್ರಧಾನಿ ಇಂದು ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಸೆಕ್ಟರ್‌ನಲ್ಲಿರುವ ಸೇನಾ ಶಿಬಿರಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಸಂದರ್ಭವನ್ನು ಕಳೆದರು.

ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೌಶೇರಾದಲ್ಲಿ ಯೋಧರನ್ನು ಸನ್ಮಾನಿಸಿದರು ಮತ್ತು ಸಂವಾದ ನಡೆಸಿದರು, ಯೋಧರಿಗೆ ಸಿಹಿ ಹಂಚಿದರು.

ಈ ವೇಳೆ ಹೆಣ್ಣು ಮಕ್ಕಳಿಗಾಗಿ ಉನ್ನತ ಸೇನಾ ಶಾಲೆಗಳ ತೆರೆಯಲಾಗುತ್ತಿದೆ, ಎಂದರು.

ಪ್ರಧಾನಿಯವರು 2014ರಿಂದ ಪ್ರತಿ ವರ್ಷವೂ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೂಂಚ್ ಮತ್ತು ರಜೌರಿ ಸೆಕ್ಟರ್‌ಗಳಲ್ಲಿ ಭದ್ರತಾ ಪಡೆಗಳು ಭದ್ರತೆಯನ್ನು ಹೆಚ್ಚಿಸಿವೆ.

 

Stay updated with us for all News in Kannada at Facebook | Twitter
Scroll Down To More News Today