ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (74) ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (74) ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಅವರು ಭಾನುವಾರ ಪಾಟ್ನಾದ ತಮ್ಮ ಮನೆಯಲ್ಲಿ ಬಿದ್ದು ಭುಜಕ್ಕೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಲಾಲು ಪ್ರಸಾದ್ ಯಾದವ್ ಪುತ್ರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಕರೆ ಮಾಡಿ ಲಾಲು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಆರ್‌ಜೆಡಿ ಅಧಿಕೃತ ಪ್ರತಿನಿಧಿ ಚಿತ್ತರಂಜನ್ ಗಗನ್ ಮಂಗಳವಾರ ಈ ವಿಷಯವನ್ನು ಪ್ರಕಟಿಸಿದ್ದಾರೆ. ಆರ್‌ಜೆಡಿ ನಾಯಕ ಲಾಲು ಅವರ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಲು ಪುತ್ರ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿದ್ದಾರೆ. ಲಾಲು ಶೀಘ್ರ ಗುಣಮುಖರಾಗಲಿ ಎಂದು ಮೋದಿ ಹಾರೈಸಿದ್ದಾರೆ. ಸದ್ಯ ಲಾಲು ಪಾಟ್ನಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವು ವೈದ್ಯರ ತಂಡ ಲಾಲು ಅವರ ಆರೋಗ್ಯ ಸ್ಥಿತಿಯನ್ನು ಗಮನಿಸುತ್ತಿದೆ ಎಂದು ಚಿತ್ತರಂಜನ್ ಗಗನ್ ಹೇಳಿದ್ದಾರೆ.
PM Modi inquired about the health of Lalu Prasad Yadav
Follow us On
Google News |