ಒಡಿಶಾ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ, ರೈಲ್ವೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಆಸ್ಪತ್ರೆಗೂ ಭೇಟಿ
Odisha train accident: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಕೋರಮಂಡಲ್ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳು ಹಳಿತಪ್ಪಿದವು. ಅಧಿಕಾರಿಗಳು ರಾತ್ರಿ 7.20ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿಸಿದರು.
Odisha train accident: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಕೋರಮಂಡಲ್ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳು ಹಳಿತಪ್ಪಿದವು. ಅಧಿಕಾರಿಗಳು ರಾತ್ರಿ 7.20ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಬಾಲಸೋರ್‌ನಲ್ಲಿ ಅಪಘಾತ ಸ್ಥಳಕ್ಕೆ ತಲುಪಿದ್ದಾರೆ. ಈ ಸಮಯದಲ್ಲಿ, ಅವರು ಅಪಘಾತದ ಅವಲೋಕನವನ್ನು ತೆಗೆದುಕೊಳ್ಳುತ್ತಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿಯವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದರು ಮತ್ತು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದಲೂ ಸಹಾಯವನ್ನು ಘೋಷಿಸಿದ್ದರು.
ಒಡಿಶಾ ರೈಲು ಅಪಘಾತದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಘಟನೆಯ ಅವಲೋಕನ ನಡೆಸಿದರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಮಾಹಿತಿ ಪಡೆದರು. ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಸಹ ದೀರ್ಘ ಚರ್ಚೆ ನಡೆಸಿದರು.
ಇದುವರೆಗೆ 261 ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಅಧಿಕೃತ ಅಂಕಿಅಂಶಗಳಲ್ಲಿ ದೃಢಪಟ್ಟಿದೆ. ಈ ಅಪಘಾತದಲ್ಲಿ 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಒಡಿಶಾ ರೈಲು ಅಪಘಾತ ನಂತರ ಗಾಯಾಳುಗಳಿಗೆ ರಕ್ತದಾನಕ್ಕೆ ಮುಂದಾದ ಸ್ಥಳೀಯ ಜನರು! ಮನಕಲುಕುವಂತಿದೆ ದೃಶ್ಯಗಳು
ಕೊಲ್ಕತ್ತಾ ಬಳಿಯ ಶಾಲಿಮಾರ್ ನಿಲ್ದಾಣದಿಂದ ಕೋರಮಂಡಲ್ ಎಕ್ಸ್‌ಪ್ರೆಸ್ ಚೆನ್ನೈ ಸೆಂಟ್ರಲ್‌ಗೆ ತೆರಳುತ್ತಿದ್ದಾಗ ರಾತ್ರಿ 7.20 ರ ಸುಮಾರಿಗೆ ಬಹಂಗಾ ಬಜಾರ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ರೈಲ್ವೇ ಸಚಿವರೂ ಜತೆಗಿದ್ದಾರೆ.
PM Modi reached the place of train accident in Odisha