ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿಯವರಿಂದ ಮಾಲಾರ್ಪಣೆ

PM Modi will pay homage to the soldiers at the newly built National War Memorial at the India Gate

ಕನ್ನಡ ನ್ಯೂಸ್ ಟುಡೇ

ನವದೆಹಲಿ : 71 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಮುನ್ನ ಭಾನುವಾರ ಬೆಳಿಗ್ಗೆ ಇಲ್ಲಿನ ಇಂಡಿಯಾ ಗೇಟ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ರಾಷ್ಟ್ರೀಯ ಯುದ್ಧ ಸ್ಮಾರಕ (ಎನ್‌ಡಬ್ಲ್ಯುಎಂ) ಹುತಾತ್ಮ ಸೈನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಲಿದ್ದಾರೆ.

ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರ ಪ್ರಧಾನ ಮಂತ್ರಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಮಾಲಾರ್ಪಣೆ ಮಾಡುವುದು ಇದೇ ಮೊದಲು ಎಂದು ಗಣರಾಜ್ಯೋತ್ಸವದ ಮೆರವಣಿಗೆ ಉಪ ಕಮಾಂಡರ್ ಮೇಜರ್ ಜನರಲ್ ಅಲೋಕ್ ಕಕ್ಕರ್ ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಪಿಎಂ ಮೋದಿಯವರು ಉದ್ಘಾಟಿಸಿದ ಎನ್‌ಡಬ್ಲ್ಯೂಎಂ ಅನ್ನು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಸೈನಿಕರ ನೆನಪಿಗಾಗಿ ನಿರ್ಮಿಸಲಾಗಿದೆ.

“ಮೆರವಣಿಗೆ ಪ್ರಾರಂಭವಾಗುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಗೇಟ್‌ನಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸುತ್ತಾರೆ “ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ನಂತರ, ಎರಡು ನಿಮಿಷಗಳ ಮೌನವನ್ನು ಆಚರಿಸಲಾಗುವುದು “ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.////