India News

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಷ್ಯಾ ಭೇಟಿ, 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಅವರು ಇದೇ ತಿಂಗಳ 22 ರಿಂದ 24 ರವರೆಗೆ ಕಜಾನ್‌ನಲ್ಲಿ ನಡೆಯಲಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ರಷ್ಯಾ ಭೇಟಿ

ಇದರ ಭಾಗವಾಗಿ ಅವರು ಅಕ್ಟೋಬರ್ 22 ರಿಂದ 23 ರವರೆಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿಯ ವೇಳೆ ಮೋದಿ ಅವರು ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಷ್ಯಾ ಭೇಟಿ, 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ನಾಲ್ಕು ತಿಂಗಳ ಅವಧಿಯಲ್ಲಿ ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ಈ ವರ್ಷ ಜುಲೈ 8-9 ರಂದು ಅವರು ರಷ್ಯಾಕ್ಕೆ ಭೇಟಿ ನೀಡಿದ್ದರು.

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಅವರು ಮೊದಲ ಬಾರಿಗೆ ಮಾಸ್ಕೋಗೆ ಭೇಟಿ ನೀಡಿದರು. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲದೆ ಪ್ರಧಾನಿ ಮೋದಿ ರಷ್ಯಾದಲ್ಲಿ ಭಾರತೀಯ ಮೂಲದ ಜನರನ್ನು ಭೇಟಿ ಮಾಡಿದರು.

PM Modi will visit Russia from 22-23 October 2024 at the invitation of Russian President Vladimir Putin

Our Whatsapp Channel is Live Now 👇

Whatsapp Channel

Related Stories