ಭಾರತ-ಪಾಕ್ ಯುದ್ಧ: ಎಲ್ಲಾ ಸಮಯದಲ್ಲೂ ಸಿದ್ಧರಾಗಿರಿ, ಪ್ರಧಾನಿ ಮೋದಿ ಆದೇಶ

ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

  • ಸಚಿವಾಲಯದ ಕಾರ್ಯದರ್ಶಿಗಳೊಂದಿಗೆ ಮೋದಿ ಸಭೆ
  • ಸಿವಿಲ್ ಡಿಫೆನ್ಸ್ ಹಾಗೂ ಮೂಲಸೌಕರ್ಯದ ಭದ್ರತೆ ಕುರಿತು ಚರ್ಚೆ
  • ತಪ್ಪು ಮಾಹಿತಿ ವಿರುದ್ಧ ತ್ವರಿತ ಕ್ರಮಕ್ಕೆ ಸೂಚನೆ

ಆಪರೇಷನ್ ಸಿಂಧೂರ್ (Operation Sindoor) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಆಪರೇಶನ್ ಸಿಂಧೂರ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತೆಗೆ (civil defense) ಸಂಬಂಧಿಸಿದಂತೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದು, ರಾಜ್ಯ ಮತ್ತು ಕೇಂದ್ರದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.

ರಾಷ್ಟ್ರೀಯ ಭದ್ರತೆ ಮತ್ತು ಕಾರ್ಯಾಚರಣೆಯ ಸನ್ನದ್ಧತೆಗೆ ಸರ್ಕಾರದ ಬದ್ಧತೆಯನ್ನು ತಿಳಿಸಿದ ಪ್ರಧಾನಿ, ಸಭೆಯಲ್ಲಿ ನಿರಂತರ ಜಾಗರೂಕತೆ ಮತ್ತು ಸ್ಪಷ್ಟ ಮಾಹಿತಿಗಾಗಿ ಕರೆ ನೀಡಿದರು.

ನಾಗರಿಕ ರಕ್ಷಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು ಮತ್ತು ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು (critical infrastructure) ಖಚಿತಪಡಿಸಿಕೊಳ್ಳುವುದು ಮುಂತಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯ ಅಧಿಕಾರಿಗಳು ಮತ್ತು ಕ್ಷೇತ್ರ ಮಟ್ಟದ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಪ್ರಧಾನಿ ಸಚಿವಾಲಯಗಳಿಗೆ ಸಲಹೆ ನೀಡಿದರು.

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸನ್ನದ್ಧತೆಯನ್ನು ಸಭೆ ಪರಿಶೀಲಿಸಿದೆ ಎಂದು ಹೇಳಿಕೆ ತಿಳಿಸಿದೆ.

ಮಹತ್ವದ ವಿಷಯವೆಂದರೆ, ಸರ್ಕಾರ ಸದಾ ಎಚ್ಚರಿಕೆಯಿಂದ ಮತ್ತು ನಿಖರ ಮಾಹಿತಿಯೊಂದಿಗೆ ಕಾರ್ಯನಿರ್ವಹಿಸಬೇಕೆಂದು ಮೋದಿ ಕರೆ ನೀಡಿದರು. ಇದುವರೆಗೆ ನಡೆದ ಘಟನೆಗಳು ಮತ್ತು ಭವಿಷ್ಯಕ್ಕೆ ತಯಾರಿ ಮಾಡುವ ನಿಟ್ಟಿನಲ್ಲಿ ನಿರಂತರ ಭದ್ರತಾ ಸಮೀಕ್ಷೆಗಳು ಅಗತ್ಯವಿದೆ ಎಂಬ ಅವರ ಅಭಿಪ್ರಾಯ ಸ್ಪಷ್ಟವಾಯಿತು.

PM Modi’s Key Security Review After Operation Sindoor

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories