ಇರಾನಿ ಗ್ಯಾಂಗ್ ನಿಂದ ಪೊಲೀಸರ ಮೇಲೆ ಕಲ್ಲು ತೂರಾಟ, ಪೊಲೀಸ್ ಅಧಿಕಾರಿಗೆ ಗಾಯ
ಪೊಲೀಸರು ಇರಾನಿ ತಂಡದ ಸದಸ್ಯರನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.
ಮುಂಬೈ (Mumbai): ಇರಾನಿ ಗ್ಯಾಂಗ್ ಸದಸ್ಯರನ್ನು ಬಂಧಿಸಲು ಪೊಲೀಸರು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. (Stone Pelting) ಈ ಘಟನೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇರಾನಿ ಗ್ಯಾಂಗ್ ಸದಸ್ಯರು ಚೈನ್ ಸ್ನ್ಯಾಚಿಂಗ್ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮುಂಬೈನ ಅಂಧೇರಿ ಪೊಲೀಸ್ ಠಾಣೆಯ ಪೊಲೀಸರ ತಂಡ ಬುಧವಾರ ರಾತ್ರಿ ಅಂಬಿವ್ಲಿ ಪ್ರದೇಶಕ್ಕೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ತೆರಳಿದೆ.
ಈ ಸಂದರ್ಭದಲ್ಲಿ ಇರಾನಿ ಗ್ಯಾಂಗ್‌ಗೆ ಸಂಬಂಧಿಸಿದವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.
ಕಲ್ಲು ತೂರಾಟ ನಡೆಸಿದವರಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೋಲೀಸರ ಮೇಲಿನ ಈ ಕಲ್ಲು ದಾಳಿಯ ಫೋಟೋಗಳು ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Policeman Injured In Stone Pelting Incident In Maharashtra Thane