ಜಮ್ಮು ಮತ್ತು ಕಾಶ್ಮೀರ: ಪೂಂಚ್ ಸೆಕ್ಟರ್‌ನಲ್ಲಿ ಎನ್‌ಕೌಂಟರ್

ಪೂಂಚ್ ಸೆಕ್ಟರ್ ನಲ್ಲಿ ಎನ್ ಕೌಂಟರ್ ನಲ್ಲಿ ಸೈನಿಕರು ಉಗ್ರರ ವಿರುದ್ಧ ಹೋರಾಡುತ್ತಲೇ ಇದ್ದಾರೆ. ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರನ್ನು ಬೇಟೆಯಾಡಲು ಭಾರತೀಯ ಸೈನಿಕರು ರಂಗಕ್ಕಿಳಿದಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರ :  ಪೂಂಚ್ ಸೆಕ್ಟರ್ ನಲ್ಲಿ ಎನ್ ಕೌಂಟರ್ ನಲ್ಲಿ ಸೈನಿಕರು ಉಗ್ರರ ವಿರುದ್ಧ ಹೋರಾಡುತ್ತಲೇ ಇದ್ದಾರೆ. ಅರಣ್ಯ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರನ್ನು ಬೇಟೆಯಾಡಲು ಭಾರತೀಯ ಸೈನಿಕರು ರಂಗಕ್ಕಿಳಿದಿದ್ದಾರೆ.

ಕಳೆದ 12 ದಿನಗಳಿಂದ ಈ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಇದು ದೀರ್ಘಾವಧಿಯ ಕಾರ್ಯಾಚರಣೆಯಾಗಿದೆ.

ಈ ಪ್ರದೇಶದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ಗುಂಡು ಹಾರಿಸಿ ದಟ್ಟ ಅರಣ್ಯ ಪ್ರದೇಶಕ್ಕೆ ಮರಳುತ್ತಿದ್ದಾರೆ. ಇದರೊಂದಿಗೆ ಭಯೋತ್ಪಾದಕರ ಸದೆಬಡೆಯಲು ಭಾರತೀಯ ಸೇನೆ ರಂಗಕ್ಕಿಳಿದಿದೆ. ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.