ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಫೋಟ: ಹೈದರಾಬಾದ್‌ನಲ್ಲಿ ತುರ್ತು ಭೂಸ್ಪರ್ಶ
ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರ ಪವರ್ ಬ್ಯಾಂಕ್‌ನಿಂದ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಹೈದರಾಬಾದ್‌ನಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.

- ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಫೋಟ
- ಹೈದರಾಬಾದ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ
- ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತ; ತನಿಖೆಗೆ ಆದೇಶ
ದೆಹಲಿಯಿಂದ ಚೆನ್ನೈಗೆ (Delhi to Chennai) ತೆರಳುತ್ತಿದ್ದ ಇಂಡಿಗೋ (IndiGo Flight) ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ.
ಈ ಘಟನೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Hyderabad Airport) ತುರ್ತಾಗಿ ಇಳಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಿಂದ 5 ಹೊಸ ರೂಟ್‌ಗಳು! ಏರ್ ಇಂಡಿಯಾ ವಿಮಾನ ಸೇವೆ ವಿಸ್ತರಣೆ
ವಿಮಾನದಲ್ಲಿದ್ದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದ್ದು, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಯ ವಕ್ತಾರರು ಮಾಹಿತಿ ನೀಡಿದ್ದು, ಪ್ರಯಾಣಿಕರ ವೈಯಕ್ತಿಕ ಎಲೆಕ್ಟ್ರಾನಿಕ್ ಸಾಧನದಿಂದ ಹೊಗೆ ಕಾಣಿಸಿಕೊಂಡ ತಕ್ಷಣ ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ಹೈದರಾಬಾದ್‌ಗೆ ತಿರುಗಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ನಿಮಗಿದು ಗೊತ್ತಾ? ಪ್ರಯಾಣಿಕರ ಗಮನಕ್ಕೆ: ರೈಲಿನಲ್ಲಿ ಇಂತವರಿಗೆ ಉಚಿತ ಪ್ರಯಾಣ ಅವಕಾಶ
ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಬಳಿಕ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದುವರಿಸಿ ಚೆನ್ನೈ ತಲುಪಲು ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದೆ. ಪವರ್ ಬ್ಯಾಂಕ್‌ನಿಂದ ಹೊಗೆ ಕಾಣಿಸಿಕೊಂಡ ಘಟನೆಗೆ ಸಂಬಂಧಿಸಿದಂತೆ ಅಧಿಕೃತ ತನಿಖೆಗೂ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



