India News

ಕಾರು ಬಸ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ, 10 ಮಂದಿ ಸ್ಥಳದಲ್ಲೇ ಸಾವು

ಮಹಾಕುಂಭಕ್ಕೆ ತೆರಳುತ್ತಿದ್ದ ಛತ್ತೀಸ್‌ಗಢದ ಭಕ್ತರ ಕಾರು ಬಸ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ. 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 19 ಜನ ಗಾಯಗೊಂಡಿದ್ದಾರೆ.

  • ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ
  • ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದು 10 ಮಂದಿ ಸಾವು
  • ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ, ಸಿಎಂ ಸಂತಾಪ

Prayagraj Road Accident : ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ 2 ಗಂಟೆಗೆ ಭೀಕರ ಅಪಘಾತ ಸಂಭವಿಸಿದ್ದು, ಛತ್ತೀಸ್‌ಗಢದ 10 ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶದ 19 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯ ಸಮಯದಲ್ಲಿ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ 10 ಮಂದಿ ಮಹಾಕುಂಭ ಸ್ನಾನಕ್ಕಾಗಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಸಂಚರಿಸುತ್ತಿದ್ದ ಕಾರು ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಭಕ್ತರನ್ನು ಕೊಂಡೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಘಟನೆಯಿಂದ ಸ್ಥಳದಲ್ಲಿ ಜನರು ಕೂಡಿದ್ರು, ಪೊಲೀಸರು ಕೂಡಲೇ ಆಗಮಿಸಿ ಗಾಯಾಳುಗಳಿಗೆ ನೆರವು ನೀಡಿದರು.

ಕಾರು ಬಸ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ, 10 ಮಂದಿ ಸ್ಥಳದಲ್ಲೇ ಸಾವು

ಗಾಯಾಳುಗಳ ಸ್ಥಿತಿ ಗಂಭೀರ:

ಅಪಘಾತದ ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. 19 ಮಂದಿಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ಕೆಲವರನ್ನು ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತಿನ ಪತ್ತೆ ಕಾರ್ಯ ಮುಂದುವರಿದಿದ್ದು, ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ.

ಸಿಎಂ ಸಂತಾಪ:

ಘಟನೆಯ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Prayagraj Road Accident, 10 Devotees Killed, 19 Injured

English Summary

Our Whatsapp Channel is Live Now 👇

Whatsapp Channel

Related Stories