ರಾಷ್ಟ್ರಪತಿ ಮತ್ತು ಪ್ರಧಾನಿ ಮೋದಿ ಅವರು ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು

ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 65ನೇ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 65ನೇ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ. ಸಂಸತ್ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಹಲವು ಸಂಸದರು ಉಪಸ್ಥಿತರಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಏಪ್ರಿಲ್ 4, 1891 ರಂದು ಜನಿಸಿದರು. ಸಾಮಾನ್ಯ ದಲಿತ ಕುಟುಂಬದಲ್ಲಿ ಜನಿಸಿದ ಅವರು ಅರ್ಥಶಾಸ್ತ್ರಜ್ಞರಾಗಿ, ರಾಜಕಾರಣಿಯಾಗಿ ಮತ್ತು ಸಂವಿಧಾನ ರಚನೆಕಾರರಾಗಿ ಬೆಳೆದರು. ಅವರು ಡಿಸೆಂಬರ್ 6, 1956 ರಂದು ನಿಧನರಾದರು. 1990ರಲ್ಲಿ ಅಂದಿನ ಸರ್ಕಾರ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಿತ್ತು.

Stay updated with us for all News in Kannada at Facebook | Twitter
Scroll Down To More News Today