ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಪ್ರತಿಕ್ರಿಯೆ
ಈ ಬಜೆಟ್ ಭಾರತಕ್ಕೆ ಭದ್ರ ಬುನಾದಿ ಹಾಕಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಜೆಟ್‌ನಲ್ಲಿ ಸುಧಾರಣೆ ತರಲಾಗುವುದು. ಪ್ರತಿಯೊಬ್ಬ ಭಾರತೀಯನ ಕನಸನ್ನು ನನಸು ಮಾಡುವ ಬಜೆಟ್ ಇದಾಗಿದೆ.
Budget 2025 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ಗೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಪ್ರತಿಕ್ರಿಯೆ ನೀಡಿದ್ದಾರೆ. ಈ ಬಜೆಟ್ ಭಾರತಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ. ಬಜೆಟ್ ವಿದ್ಯಾರ್ಥಿಗಳಿಗೆ ಅನೇಕ ಅವಕಾಶಗಳನ್ನು ಒದಗಿಸುತ್ತಿದೆ ಎಂದು ಹೇಳಿದ ಪ್ರಧಾನಿ, ಈ ಬಜೆಟ್ ದೇಶದ ಯುವಕರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಈ ಬಜೆಟ್ ಭಾರತಕ್ಕೆ ಭದ್ರ ಬುನಾದಿ ಹಾಕಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಜೆಟ್‌ನಲ್ಲಿ ಸುಧಾರಣೆ ತರಲಾಗುವುದು. ಪ್ರತಿಯೊಬ್ಬ ಭಾರತೀಯನ ಕನಸನ್ನು ನನಸು ಮಾಡುವ ಬಜೆಟ್ ಇದಾಗಿದೆ.
ಈ ಬಜೆಟ್‌ನಿಂದ ಹೂಡಿಕೆ ಬರಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಬಜೆಟ್ ದೇಶದ ಎಲ್ಲ ಜನತೆಗೆ ಸೇರಿದ್ದು. ಇದು ಜನತಾ ಜನಾರ್ಧನ್ ಬಜೆಟ್. ಇದಕ್ಕಾಗಿ ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ದೇಶ ಅಭಿವೃದ್ಧಿ ಮತ್ತು ಪರಂಪರೆಯಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಎಲ್ಲ ಕಡೆಯಿಂದ ಉದ್ಯೋಗ ಕಲ್ಪಿಸುವ ಬಜೆಟ್ ಇದಾಗಿದೆ ಎಂದ ಪ್ರಧಾನಿ, ಈ ಬಜೆಟ್ ನಲ್ಲಿ ಪ್ರವಾಸೋದ್ಯಮ ಉದ್ಯೋಗ ನೀಡಲಿದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.
ಈ ಬಜೆಟ್‌ನಲ್ಲಿ ರೂ. 12 ಲಕ್ಷದವರೆಗೆ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಬಜೆಟ್‌ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು ರೂ.5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಬಜೆಟ್‌ನಲ್ಲಿ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ಈ ಬಜೆಟ್ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡಲಿದೆ ಎಂದು ಪ್ರಧಾನಿ ಹೇಳಿದರು.
ಈ ಬಜೆಟ್‌ನಿಂದ ಸ್ವಾವಲಂಬಿ ಭಾರತಕ್ಕೆ ಉತ್ತೇಜನ ಸಿಗಲಿದೆ. ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದ್ದು, ಸ್ಟಾರ್ಟ್ ಅಪ್ ಗಳಿಗೆ ಹೊಸ ಸಾಲವನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi’s First Reaction on the Budget