ಬಂಗಾಳದಲ್ಲಿ ಪ್ರತಿಭಟನಾಕಾರರಿಂದ ಪೊಲೀಸರ ಮೇಲೆ ಕಲ್ಲು ತೂರಾಟ

ಬಂಗಾಳದ ಹೌರಾದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು

ಕೋಲ್ಕತ್ತಾ: ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು.

ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಮೂಲಗಳ ಪ್ರಕಾರ ಹೌರಾದ ಪಂಚಲಾ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಹಿಂಸಾಚಾರದ ಹಿನ್ನೆಲೆಯಲ್ಲಿ ಹೌರಾದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರೈಲ್ವೆ ನಿಲ್ದಾಣದ ಸುತ್ತಮುತ್ತ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಇದು ಈ ತಿಂಗಳ 15ರವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಗಾಳದಲ್ಲಿ ಪ್ರತಿಭಟನಾಕಾರರಿಂದ ಪೊಲೀಸರ ಮೇಲೆ ಕಲ್ಲು ತೂರಾಟ - Kannada News

ಶ್ರೀಸಾಮಾನ್ಯನಿಗೆ ಏಕೆ ಶಿಕ್ಷೆ?

ಹೌರಾ ಹಿಂಸಾಚಾರದ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು ಮಾಡಿದ ಪಾಪಗಳಿಗೆ ಜನ ಸಾಮಾನ್ಯರು ಯಾಕೆ ಶಿಕ್ಷೆ ಅನುಭವಿಸುತ್ತಿದ್ದಾರೆ? ಹಿಂಸಾಚಾರದ ಹಿಂದೆ ಕೆಲವು ರಾಜಕೀಯ ಪಕ್ಷಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಪ್ರಚೋದನೆಗೆ ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Protesters Pelted Stones At Police In Howrah

Follow us On

FaceBook Google News