ಹೃದಯಸ್ಪರ್ಶಿ ವಿಡಿಯೋ; ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಮಹಾರಾಷ್ಟ್ರದ ಪುಣೆಯಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಇಬ್ಬರು ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ

ಮಹಾರಾಷ್ಟ್ರದಲ್ಲಿ ಕೆಲ ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನದಿ, ತೊರೆಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟ ತಲುಪಿದೆ. ಈ ನಡುವೆ ಮಹಾರಾಷ್ಟ್ರದ ಪುಣೆಯಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಇಬ್ಬರು ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಅವರ ಸಾಹಸ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಸಂಸದೆ ಸುಪ್ರಿಯಾ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ದತ್ತವಾಡಿ, ಪುಣೆ ಪೊಲೀಸ್ ಪೇದೆ ಸದ್ದಾಂ ಶೇಖ್ ಮತ್ತು ಅಜಿತ್ ಪೋಕರೆ.. ಶಿವಣೆಯ ಬಾಗುಲ್ ಉದ್ಯಾನದ ಬಳಿ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಪ್ರಾಣವನ್ನೇ ಪಣಕ್ಕಿಟ್ಟು ಇಬ್ಬರೂ ತೋರಿದ ಧೈರ್ಯ ಶ್ಲಾಘನೀಯ! ಮಹಾರಾಷ್ಟ್ರ ಪೊಲೀಸರ ಬಗ್ಗೆ ನಮಗೆ ಹೆಮ್ಮೆ ಇದೆ!’ ಎಂದು ಅದಕ್ಕೆ ಅವರು ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರಿಗೆ ಜನ ಅಭಿನಂದನೆ ಸಲ್ಲಿಸುತ್ತಿದ್ದಾರೆ.

Kannada News

Follow us On

FaceBook Google News