ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ

ಮೂರು ಕೃಷಿ ಕಾನೂನುಗಳ ವಿರುದ್ಧ ನಡೆದ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ರೈತರ ಕುಟುಂಬದ ಸದಸ್ಯರಿಗೆ ಪಂಜಾಬ್ ಸರ್ಕಾರ ಉದ್ಯೋಗ ನೀಡಿದೆ.

ಚಂಡೀಗಢ: ಮೂರು ಕೃಷಿ ಕಾನೂನುಗಳ ವಿರುದ್ಧ ನಡೆದ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ರೈತರ ಕುಟುಂಬದ ಸದಸ್ಯರಿಗೆ ಪಂಜಾಬ್ ಸರ್ಕಾರ ಉದ್ಯೋಗ ನೀಡಿದೆ. ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಅವರು 11 ರೈತ ಕುಟುಂಬದ ಸದಸ್ಯರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಈ ಕುರಿತು ಸಿಎಂ ಕಚೇರಿ ಶನಿವಾರ ಪ್ರಕಟಿಸಿದೆ. ಈ ನಡುವೆ ಮೂರು ಕಾನೂನುಗಳ ವಿರುದ್ಧ ಕಳೆದ ಮೂರು ವರ್ಷಗಳಿಂದ ರೈತರು ನಡೆಸುತ್ತಿದ್ದ ಆಂದೋಲನಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಅವುಗಳನ್ನು ರದ್ದುಪಡಿಸುವ ಕಾನೂನನ್ನು ತಂದಿದೆ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಳಿಸಿದ ರೈತರು ಶನಿವಾರದಿಂದ ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today