ಸಿಧು ಮೂಸೆವಾಲಾ ಹಂತಕರ ಎನ್‌ಕೌಂಟರ್
ದೇಶಾದ್ಯಂತ ಸಂಚಲನ ಮೂಡಿಸಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಅಮೃತಸರ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಅಮೃತಸರ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಜಗರೂಪಸಿಂಗ್ ರೂಪಾ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕೂಸಾ… ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದರು.
ತಕ್ಷಣ ಎಚ್ಚೆತ್ತ ಪೊಲೀಸರು ಪ್ರತಿದಾಳಿ ನಡೆಸಿದರು. ಸುಮಾರು 4 ಗಂಟೆಗಳ ಕಾಲ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಆರೋಪಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಹಾಗೂ ಓರ್ವ ಪತ್ರಕರ್ತ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
punjabi singer siddu murderers shot dead by amritsar police in an encounter
Follow us On
Google News |