Categories: India News

Rahul Gandhi Appears Before Ed: ನ್ಯಾಷನಲ್ ಹೆರಾಲ್ಡ್ ಕೇಸ್, ಇಂದು ಇಡಿ ಮುಂದೆ ರಾಹುಲ್ ಗಾಂಧಿ ಹಾಜರು

Story Highlights

Rahul Gandhi Appears Before Ed: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುತ್ತಿದ್ದಾರೆ. 

Ads By Google

ನವದೆಹಲಿ: Rahul Gandhi Appears Before Ed In National Herald Case – ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ನ ಹಣಕಾಸು ಅವ್ಯವಹಾರದ ಬಗ್ಗೆ ದೆಹಲಿಯ ಇಡಿ ಕೇಂದ್ರ ಕಚೇರಿಯ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ.

ರಾಹುಲ್ ಇಡಿ ಮುಂದೆ ಇದೇ ತಿಂಗಳ 2ರಂದು ಹಾಜರಾಗಬೇಕಿತ್ತು. ಆದರೆ, ಅವರ ವಿದೇಶಿ ಪ್ರವಾಸದ ಹಿನ್ನೆಲೆ ಇಂದಿಗೆ ಮುಂದೂಡಲಾಗಿದೆ. ಆದರೆ, ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಜೂನ್ 23ರಂದು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.

ಈ ಮಧ್ಯೆ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ರಾಹುಲ್ ಇಡಿ ಮುಂದೆ ಹಾಜರಾದಾಗಿನಿಂದ ಕೊನೆಯವರೆಗೂ ಎಲ್ಲಾ ರಾಜ್ಯಗಳ ಇಡಿ ಕಚೇರಿಗಳ ಮುಂದೆ ಧರಣಿ ನಡೆಸಲಿದ್ದಾರೆ. ರಾಹುಲ್‌ಗೆ ಬೆಂಬಲವಾಗಿ ಪಕ್ಷದ ಉನ್ನತ ನಾಯಕರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತರವರೆಗೆ ಎಲ್ಲರೂ ಈ ಆಂದೋಲನಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

Rahul Gandhi Appears Before Ed In National Herald Case

 

Ads By Google
Share
Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Published by
Bengaluru, Karnataka, India
Edited By: Satish Raj Goravigere