ಅಧ್ಯಕ್ಷ ಸ್ಥಾನಕ್ಕೆ ಮತ್ತೆ ರಾಹುಲ್ ಇಲ್ಲ!
137 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ಗೆ ಸಮರ್ಥ ನಾಯಕರ ಕೊರತೆ ಎದುರಾಗಿದೆ
ನವದೆಹಲಿ: 137 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ಗೆ ಸಮರ್ಥ ನಾಯಕರ ಕೊರತೆ ಎದುರಾಗಿದೆ. ಇಂದಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಆದರೆ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.
ಎಲ್ಲರೂ ರಾಹುಲ್ ಗಾಂಧಿ ಅಧ್ಯಕ್ಷರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿಯಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಮತ್ತೆ ಆ ಸ್ಥಾನಕ್ಕೇರಲು ಪಕ್ಷದ ನಾಯಕರು ಯಾರೇ ಹೇಳಿದರೂ ಇಲ್ಲ ಎನ್ನುತ್ತಿದ್ದಾರೆ.
ಇದನ್ನೂ ಓದಿ : ವೆಬ್ ಸ್ಟೋರೀಸ್
ಹಾಲಿ ಅಧ್ಯಕ್ಷೆ ಸೋನಿಯಾ ಕೂಡ ಆರೋಗ್ಯದ ಕಾರಣದಿಂದ ಅಧ್ಯಕ್ಷ ಸ್ಥಾನವನ್ನು ಮುಂದುವರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪಕ್ಷದ ಸದಸ್ಯರು ಹೇಳುತ್ತಾರೆ.
rahul gandhi no for the post of congress president
Follow us On
Google News |