ರೈತರಿಗೆ 2 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ, ಯಾವುದೇ ಜಾಮೀನು ಬೇಕಿಲ್ಲ

ಭಾರತೀಯ ರಿಸರ್ವ್ ಬ್ಯಾಂಕ್ ಮುಂದಿನ ವರ್ಷ ಜನವರಿ 1 ರಿಂದ ರೈತರಿಗೆ 2 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ ನೀಡುವ ನಿರ್ಧಾರವನ್ನು ಜಾರಿಗೆ ತರಲು ನಿರ್ಧರಿಸಿದೆ.

ರೈತರಿಗೆ 2 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ (Loan) ನೀಡುವ ನಿರ್ಧಾರವನ್ನು ಮುಂದಿನ ವರ್ಷದ ಜನವರಿ 1 ರಿಂದ ಜಾರಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ಧರಿಸಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಬ್ಯಾಂಕ್‌ಗಳಿಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೊಸ ಸಾಲದ ನಿಯಮಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಲಾಗಿದೆ.

ಹೂಡಿಕೆ ವೆಚ್ಚ ಹೆಚ್ಚಿರುವ ಹಿನ್ನೆಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಸಾಲ (Loan For Farmer) ಸೌಲಭ್ಯ ಹೆಚ್ಚಿಸಲು ಕೃಷಿ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಶೇ 86ರಷ್ಟು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು, ಸಾಲದ ಮಿತಿಯನ್ನು ಹೆಚ್ಚಿಸಿದರೆ ಅವರಿಗೆ ಅನುಕೂಲವಾಗಲಿದೆ ಎಂದು ಕೃಷಿ ಇಲಾಖೆ ಹೇಳಿದೆ.

Rbi Provides 2 Lakh Loan To Farmers Without Collateral Free

ರೈತರಿಗೆ 2 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ, ಯಾವುದೇ ಜಾಮೀನು ಬೇಕಿಲ್ಲ
Related Stories