ಒಡಿಶಾ ರೈಲು ಅಪಘಾತ ಬಗ್ಗೆ ಮರುಗಿದ ರಷ್ಯಾ, ಪಾಕಿಸ್ತಾನ… ಸಾವಿನ ಸಂಖ್ಯೆ ಕಂಡು ಶತ್ರು ದೇಶಗಳು ಸಹ ಕಣ್ಣೀರು

Story Highlights

Odisha Train Accident (ಒಡಿಶಾ ರೈಲು ಅಪಘಾತ): ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ವಿಶ್ವದಾದ್ಯಂತದ ನಾಯಕರು ದುಃಖ ವ್ಯಕ್ತಪಡಿಸುತ್ತಿದ್ದಾರೆ. ಮೂರು ರೈಲುಗಳ ಡಿಕ್ಕಿಯಲ್ಲಿ ಇಲ್ಲಿಯವರೆಗೆ 261 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ.

Odisha Train Accident (ಒಡಿಶಾ ರೈಲು ಅಪಘಾತ): ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ವಿಶ್ವದಾದ್ಯಂತದ ನಾಯಕರು ದುಃಖ ವ್ಯಕ್ತಪಡಿಸುತ್ತಿದ್ದಾರೆ. ಮೂರು ರೈಲುಗಳ ಡಿಕ್ಕಿಯಲ್ಲಿ ಇಲ್ಲಿಯವರೆಗೆ 261 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ.

Odisha train accident: ಒಡಿಶಾ ರೈಲು ಅಪಘಾತಕ್ಕೆ ನಿಜವಾದ ಕಾರಣ ಬಹಿರಂಗ, ಈ ಒಂದು ತಪ್ಪು 260 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿತು

ಶುಕ್ರವಾರ ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ರೈಲು ಅಪಘಾತದ ಬಗ್ಗೆ ರಷ್ಯಾ, ಪಾಕಿಸ್ತಾನ, ಟರ್ಕಿ ಇತ್ಯಾದಿಗಳ ಪ್ರತಿಕ್ರಿಯೆಗಳೂ ಬಂದಿವೆ. ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರ ಕಚೇರಿ ತಿಳಿಸಿದೆ.

ಒಡಿಶಾ ರೈಲು ಅಪಘಾತ ನಂತರ ಗಾಯಾಳುಗಳಿಗೆ ರಕ್ತದಾನಕ್ಕೆ ಮುಂದಾದ ಸ್ಥಳೀಯ ಜನರು! ಮನಕಲುಕುವಂತಿದೆ ದೃಶ್ಯಗಳು

“ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ದುಃಖವನ್ನು ಬರಿಸಲು ಅವರ ಕುಟುಂಬಕ್ಕೆ ಶಕ್ತಿ ನೀಡಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ರಷ್ಯಾದ ಅಧ್ಯಕ್ಷ ಪುಟಿನ್ ಅವರು ಸಂದೇಶ ಕಳುಹಿಸಿದ್ದಾರೆ. ಪಾಕಿಸ್ತಾನದ ಪ್ರಧಾನಿ ಷರೀಫ್ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

Odisha train accident
Image Source: NDTV

ಒಡಿಶಾ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ, ರೈಲ್ವೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಆಸ್ಪತ್ರೆಗೂ ಭೇಟಿ

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಒಡಿಶಾ ರೈಲು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಟ್ವೀಟ್ ಮಾಡಿ.. “ಭಾರತದಲ್ಲಿ ರೈಲು ಅಪಘಾತದಲ್ಲಿ ನೂರಾರು ಜನರ ಸಾವಿಗೆ ತೀವ್ರ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖಿತ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ…. ಎಂದಿದ್ದಾರೆ

Reaction of Russia and Pakistan on Odisha Train Accident

Related Stories