ಹೈದರಾಬಾದ್: ಹಿರಿಯ ನಟ ಹಾಗೂ ಮಾಜಿ ಕೇಂದ್ರ ಸಚಿವ ರೆಬೆಲ್ ಸ್ಟಾರ್ ಕೃಷ್ಣಂ ರಾಜು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ 3.25ಕ್ಕೆ ಕೊನೆಯುಸಿರೆಳೆದರು.
ಅವರು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತೂರಿನಲ್ಲಿ ಜನವರಿ 20, 1940 ರಂದು ಜನಿಸಿದರು. ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಟ್ಟರೂ ಖಳನಟನಾಗಿಯೂ ರಂಜಿಸಿದರು. ಅವರ ನಿಧನಕ್ಕೆ ಅನೇಕ ಸಿನಿ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
Rebel Star Krishnam Raju Died in AIG Hospital Hyderabad
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019