ಲಾಲು ಪ್ರಸಾದ್ ಯಾದವ್ ಅವರ ಸ್ಥಿತಿ ಗಂಭೀರ
ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಚಲಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರ ಪುತ್ರ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಚಲಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರ ಪುತ್ರ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. ಇತ್ತೀಚೆಗಿನ ಭಾನುವಾರದಂದು ಲಾಲು ಅವರ ಮನೆಯ ಮೆಟ್ಟಿಲುಗಳಿಂದ ಕೆಳಗೆ ಬಿದ್ದು ಬಲ ಭುಜಕ್ಕೆ ಮೂರು ಸ್ಥಳಗಳಲ್ಲಿ ಮೂಳೆ ಮುರಿತವಾಗಿತ್ತು. ಅವರ ಸ್ನಾಯುಗಳು ಮತ್ತು ಕೀಲುಗಳು ಬಿಗಿಯಾಗಿವೆ ಮತ್ತು ಸಮಸ್ಯೆ ಗಂಭೀರವಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ. ಇದರಿಂದ ಹೆಚ್ಚು ಓಡಾಡಲು ಸಾಧ್ಯವಾಗುತ್ತಿಲ್ಲ ಎಂದರು. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.
ಲಾಲು ಪ್ರಸಾದ್ ಯಾದವ್ ಅವರು ಕೆಲ ದಿನಗಳಿಂದ ಕಿಡ್ನಿ ಮತ್ತು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮೂರು ಸ್ಥಳಗಳಲ್ಲಿ ಮುರಿತದಿಂದಾಗಿ ಕೀಲುಗಳು ಮತ್ತು ಸ್ನಾಯುಗಳು ಬಿಗಿಯಾದವು. ಇದರಿಂದ ಅವರ ದೇಹದ ಚಲನವಲನ ತುಂಬಾ ಕಡಿಮೆಯಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಬಲ ಭುಜದ ಮೂಳೆ ಮುರಿತಕ್ಕೆ ಒಳಗಾಗಿದ್ದ ಲಾಲು ಅವರಿಗೆ ಆರಂಭದಲ್ಲಿ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸ್ಥಿತಿ ಹದಗೆಟ್ಟಿದ್ದರಿಂದ ಲಾಲು ಅವರನ್ನು ಉತ್ತಮ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ನನ್ನ ತಂದೆಯ ವೈದ್ಯಕೀಯ ಅಗತ್ಯತೆಗಳ ಬಗ್ಗೆ ಏಮ್ಸ್ ವೈದ್ಯರಿಗೆ ತಿಳಿದಿತ್ತು ಹಾಗಾಗಿಯೇ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಇದೇ ವೇಳೆ ಲಾಲು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ, ಅವರು ಶೀಘ್ರದಲ್ಲೇ ಮನೆಗೆ ಬರುತ್ತಾರೆ’ ಎಂದು ಲಾಲು ಪತ್ನಿ ರಾಬ್ರಿದೇವಿ ಹೇಳಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರು ಇತ್ತೀಚೆಗೆ ತಮ್ಮ ಆರೋಗ್ಯ ಹದಗೆಡುತ್ತಿರುವ ಕಾರಣ ಕಿಡ್ನಿ ಕಸಿ ಮಾಡಲು ಸಿಂಗಾಪುರಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭುಜದ ಗಾಯದಿಂದಾಗಿ ದೆಹಲಿಯ ಏಮ್ಸ್ ವೈದ್ಯರ ಸಲಹೆ ಮೇರೆಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತೇಜಸ್ವಿ ಯಾದವ್ ಹೇಳಿದ್ದಾರೆ. ಇನ್ನೊಂದೆಡೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೇಜಸ್ವಿ ಯಾದವ್ ಅವರಿಗೆ ಕರೆ ಮಾಡಿ ಲಾಲು ಅವರ ಆರೋಗ್ಯದ ಬಗ್ಗೆ ಮಾತನಾಡಿದರು.
Follow us On
Google News |