Welcome To Kannada News Today

ಹೆಂಡತಿಯ ಮೇಲೆ ಕಾನ್‌ಸ್ಟೆಬಲ್ ಹಲ್ಲೆ, ಸೋಶಿಯಲ್ ಮೀಡಿಯಾದಲ್ಲಿ ವೈರಲ್

Rumors that a police constable has attacked his wife have gone viral

🌐 Kannada News :

ಕನ್ನಡ ನ್ಯೂಸ್ ಟುಡೇ – India News 

ಅನಂತಪುರ : ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುವ ಕಾನ್‌ಸ್ಟೆಬಲ್ ಕಲ್ಯಾಣದುರ್ಗ ಬೈಪಾಸ್ ರಸ್ತೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ತನ್ನ ಹೆಣದಿಯ ಮೇಲೆ ನಿರ್ದಾಕ್ಷಿಣ್ಯ ಹಲ್ಲೆ ನಡೆಸಿದ್ದಾನೆ ಎಂಬ ಮಾತುಗಳು ಕೇಳಿಬಂದಿದೆ.

ಮಂಗಳವಾರ ರಾತ್ರಿ ಗಂಡ ಹೆಂಡತಿ ನಡುವೆ ತೀವ್ರ ಘರ್ಷಣೆ ನಡೆದಿತ್ತು. ಮತ್ತು ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿ ಮುಂಜಾನೆ ತನಕ ಹಿಂಸೆ ನೀಡಲಾಗಿದೆ ಮತ್ತು ನಿರ್ದಾಕ್ಷಿಣ್ಯವಾಗಿ ಹಲ್ಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ಗಾಯಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಲು ಅನಂತಪುರಂ ಡಿಎಸ್ಪಿ ವೀರರಾಘವರೆಡ್ಡಿ ಸೂಚಿಸಿದ್ದಾರೆ.

ಇಂತದೊಂದು ಘಟನೆ ನಿಜಕ್ಕೂ ನಡೆದಿದೆಯೇ ಅಥವಾ ಇದೊಂದು ನಕಲಿ ಸುದ್ದಿಯೇ ಎಂಬ ಬಗ್ಗೆ ಮಾಹಿತಿ ಪೊಲೀಸ್ ತನಿಖೆಯಿಂದಷ್ಟೇ ತಿಳಿಯಬೇಕಾಗಿದೆ.. ಅದೇನೇ ಇರಲಿ ಈ ಸುದ್ದಿ ಇದೀಗ ಎಲ್ಲೆಡೆ ವೈರಲ್ ಆಗಿ ಪೋಲೀಸರ ತಲೆ ಕೆಡಿಸಿದೆ.///


 

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.