ಅಕ್ರಮ ಹಣ ವರ್ಗಾವಣೆ: ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣವು 2017 ರಿಂದ ತನಿಖೆಯಲ್ಲಿದೆ. ಮೇ 30ರಂದು ಸಚಿವರನ್ನು ಬಂಧಿಸಲಾಗಿತ್ತು.

ಜೂ.7ರಂದು ನಡೆದ ತಪಾಸಣೆ ವೇಳೆ ಸಚಿವರ ಮನೆಯಲ್ಲಿ ಹಲವು ದಾಖಲೆಗಳು ಪತ್ತೆಯಾಗಿದ್ದವು. ಸತ್ಯೇಂದ್ರ ಜೈನ್‌ ಅವರ ಮನೆಯಲ್ಲಿ ಸುಮಾರು ಎರಡು ಕೋಟಿ ರೂಪಾಯಿ ಹಾಗೂ ಎರಡು ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಜೈನ್ ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಇಡಿ ತಿಳಿಸಿದೆ. ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಸತ್ಯೇಂದ್ರ ಅವರ ಕಸ್ಟಡಿ ವಿಸ್ತರಣೆಯನ್ನು ವಿರೋಧಿಸಿದರು.

Satyendar Jain Sent To 14 Day Judicial Custody In Money Laundering Case

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ