ಪಹಲ್ಗಾಮ್ ದಾಳಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಪಿಟಿಷನ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪಹಲ್ಗಾಮ್ ಭಯೋತ್ಪಾದಕ ದಾಳಿ ಘಟನೆಯ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ (Pahalgam Terror Attack) ಘಟನೆಯ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್.ಕೆ. ಸಿಂಗ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತಿರಸ್ಕರಿಸಿತು. ಫತೇ ಸಾಹು ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು.

ಇಂತಹ ಸಮಯದಲ್ಲಿ ಸೇನಾ ಪಡೆಗಳನ್ನು ದುರ್ಬಲಗೊಳಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಪ್ರತಿಯೊಬ್ಬ ಭಾರತೀಯನೂ ಕೈಜೋಡಿಸಲು ಇದು ನಿರ್ಣಾಯಕ ಸಮಯವಾಗಿದ್ದು, ಅಂತಹ ಪರಿಸ್ಥಿತಿಯಲ್ಲಿ ಸಶಸ್ತ್ರ ಪಡೆಗಳ ನೈತಿಕತೆಯನ್ನು ಕುಗ್ಗಿಸಬಾರದು ಮತ್ತು ಈ ವಿಷಯದ ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಹೋಟೆಲ್‌ನಲ್ಲಿ ಬೆಂಕಿ, ಮಗುವನ್ನು ಕಿಟಕಿಯಿಂದ ಹೊರಗೆ ಎಸೆದ ತಾಯಿ

ನ್ಯಾಯಾಧೀಶರ ಕೆಲಸ ಸಮಸ್ಯೆಗಳನ್ನು ಪರಿಹರಿಸುವುದು, ತನಿಖೆ ನಡೆಸುವುದು ಅವರ ಕಲಸವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವರು ಜವಾಬ್ದಾರಿಯುತ ವ್ಯಕ್ತಿಗಳಾಗಿ ವರ್ತಿಸಬೇಕೇ, ಈ ರೀತಿ ಭದ್ರತಾ ಪಡೆಗಳನ್ನು ದುರ್ಬಲಗೊಳಿಸುತ್ತಾರೆಯೇ ಮತ್ತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಯಾವಾಗಿನಿಂದ ತನಿಖೆಯಲ್ಲಿ ಪರಿಣಿತರಾದರು ಎಂದು ನ್ಯಾಯಾಲಯ ಕೇಳಿತು. ನ್ಯಾಯಾಲಯ ವಿವಾದಗಳನ್ನು ಮಾತ್ರ ಪರಿಹರಿಸುತ್ತದೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುತ್ತಿರುವುದಾಗಿ ಅರ್ಜಿದಾರರು ತಿಳಿಸಿದ್ದಾರೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿತು.

SC Rejects Plea Seeking Judicial Probe Into Pahalgam Terror Attack

Related Stories