ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಒಬ್ಬ ವಿದ್ಯಾರ್ಥಿ ಸಾವು

ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಈ ಘರ್ಷಣೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ನವದೆಹಲಿ: ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಈ ಘರ್ಷಣೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. (School boy Dies in Fight) ಈ ಘಟನೆ ನಡೆದಿರುವುದು ದೇಶದ ರಾಜಧಾನಿ ದೆಹಲಿಯಲ್ಲಿ.

ಮಂಗಳವಾರ ಬೆಳಗ್ಗೆ ಚಿನ್ಮಯ ವಿದ್ಯಾಲಯದಲ್ಲಿ ಬೆಳಗಿನ ಪ್ರಾರ್ಥನೆಯ ನಂತರ ಆರನೇ ತರಗತಿಯ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ 12 ವರ್ಷದ ರಾಜಕುಮಾರ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾನೆ.

ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿತಾದರೂ ಅದಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಬಾಯಲ್ಲಿ ನೊರೆ ಬರುತ್ತಿರುವುದು ಕಂಡುಬಂದಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಒಬ್ಬ ವಿದ್ಯಾರ್ಥಿ ಸಾವು

ಇದೇ ವೇಳೆ ಈ ಘಟನೆ ಹಿನ್ನಲೆಯಲ್ಲಿ ನೂರಾರು ಜನರು ಆ ಶಾಲೆಯಲ್ಲಿ ಪ್ರತಿಭಟನೆ ನಡೆಸಿದರು. ತನ್ನ ಮಗನಿಗೆ ಯಾವುದೇ ವೈದ್ಯಕೀಯ ಸಮಸ್ಯೆಗಳಿಲ್ಲ ಎಂದು ಬಾಲಕನ ತಂದೆ ಹೇಳಿದ್ದಾರೆ. ಈ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬಾಲಕನ ಶವ ಪರೀಕ್ಷೆ ನಡೆಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತೊಂದೆಡೆ ಪೊಲೀಸರು ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಮೃತ ಬಾಲಕನ ಜೊತೆ ಹೋಡೆದಾಡಿ ಅವನ ಸಾವಿಗೆ ಕಾರಣವಾದ 12 ವರ್ಷದ ಸಹಪಾಠಿಯನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

School Boy 12 Taken Into Custody For Classmates Death In Delhi School

Related Stories