ಶಾಲಾ ಬಸ್ ಪಲ್ಟಿ, ಓರ್ವ ಮೃತಪಟ್ಟಿದ್ದು ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕ

Story Highlights

School Bus Overturns : ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಜೈಪುರ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿದೆ (School Bus Overturns). ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಆ ಬಸ್ಸಿನಲ್ಲಿದ್ದ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ರಾಜಸ್ಥಾನದ (Rajasthan) ಕೋಟಾದಲ್ಲಿ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ ಮಕ್ಕಳನ್ನು ಮನೆಗೆ ಸಾಗಿಸುತ್ತಿದ್ದ ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಪಲ್ಟಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರತರಲಾಯಿತು.

ಈ ಅಪಘಾತದಲ್ಲಿ ಶಾಲಾ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 50 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಓರ್ವ ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಬಸ್ ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

School Bus Carrying Students Overturns In Rajasthan Kota, Children Injured

Related Stories