ಭಾರೀ ಮಳೆ ಮುನ್ಸೂಚನೆ, ಇಂದು ಚೆನ್ನೈನ ಎಲ್ಲಾ ಶಾಲೆಗಳಿಗೆ ರಜೆ

Story Highlights

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ

ಭಾರೀ ಮಳೆಯ ಮುನ್ಸೂಚನೆ: ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ (Heavy Rain Alert). ಈ ನಿಟ್ಟಿನಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ಕಡಲೂರು, ಮೈಲಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವರೂರು, ಪುದುಕೊಟ್ಟೈ, ರಾಮನಾಥಪುರಂ, ವಿಲ್ಲುಪುರಂ ಹಾಗೂ ಪುದುಚೇರಿ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಐಎಂಡಿ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಚೆನ್ನೈನ (Chennai) ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಜಗಡೆ ಅವರು ಇಂದು ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ (Schools remain closed).

Schools In Chennai To Remain Closed Today After Heavy Rain Alert

Related Stories