Welcome To Kannada News Today

ಅಹ್ಮದಾಬಾದ್​​ನಲ್ಲಿ ಎಲ್​ಪಿಜಿ ಸಿಲಿಂಡರ್​ ಲೀಕೇಜ್​​ನಿಂದ ಸ್ಫೋಟ

🌐 Kannada News :

ಗುಜರಾತ್​​ನ ಅಹ್ಮದಾಬಾದ್​​ನ ಹೊರವಲಯದಲ್ಲಿರುವ ಒಂದು ಫ್ಯಾಕ್ಟರಿಯ ಕೋಣೆಯಲ್ಲಿ ಎಲ್​ಪಿಜಿ ಸಿಲಿಂಡರ್​​ ಸ್ಫೋಟವಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಸಂಭವಿಸಿದ ಘಟನೆ ಈಗ ಬೆಳಕಿಗೆ ಬಂದಿದೆ. ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಕಳೆದ ಎರಡು ದಿನಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಸ್ಲಾಲಿ ಪೊಲೀಸ್​ ಠಾಣೆಯ ಸಬ್​ ಇನ್​ಸ್ಪೆಕ್ಟರ್​ ಎಸ್​.ಎಸ್​.ಗಮೇಟಿ ಶುಕ್ರವಾರ ತಿಳಿಸಿದ್ದಾರೆ. ಗ್ಯಾಸ್ ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆಂದು ಹೇಳಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.