ಪ್ರಯಾಣಿಕರ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ, ಏಳು ಮಂದಿ ಸಾವು

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಿಕ್ಕಿರಿದ ಬಸ್‌ಗೆ ತೈಲ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಂಭಾಲ್ ಜಿಲ್ಲೆಯ ಧನಾರಿ ಬಸ್ ನಿಲ್ದಾಣದ ಬಳಿ ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ.

(Kannada News) : Accident in Uttar Pradesh – ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಿಕ್ಕಿರಿದ ಬಸ್‌ಗೆ ತೈಲ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸಂಭಾಲ್ ಜಿಲ್ಲೆಯ ಧನಾರಿ ಬಸ್ ನಿಲ್ದಾಣದ ಬಳಿ ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಸಂಭಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾತನಾಡಿ, “ಇಂದು ಬೆಳಿಗ್ಗೆ ಟ್ಯಾಂಕರ್-ಬಸ್ ಡಿಕ್ಕಿಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇನ್ನೂ 25 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಮಂಜಿನಿಂದ ಅಪಘಾತ ಸಂಭವಿಸಿರಬಹುದು. ನಮಗೆ ಮಾಹಿತಿ ಬಂದ ಕೂಡಲೇ .. ನಾನು ಜಿಲ್ಲಾಧಿಕಾರಿಯೊಂದಿಗೆ ಸ್ಥಳ ತಲುಪಿದೆ. ರಕ್ಷಣಾ ಕಾರ್ಯ ನಡೆಯುತ್ತಿವೆ, ”ಎಂದು ಹೇಳಿದರು.

ಯುಪಿ ಸಿಎಂ ಕಚೇರಿ ಅಪಘಾತದ ಬಗ್ಗೆ ಹೇಳಿಕೆ ನೀಡಿದೆ. ಸಂಭಾಲ್ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

Web Title : Seven killed in oil tanker collision with passenger bus in Uttar Pradesh
ಪ್ರಯಾಣಿಕರ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ, ಏಳು ಮಂದಿ ಸಾವು

Scroll Down To More News Today