ಭೀಕರ ರಸ್ತೆ ಅಪಘಾತ, ಏಳು ಮಂದಿ ಸಾವು

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ,

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ. ಪಿಲಿಭಿತ್ ಮತ್ತು ಕುಶಿನಗರ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

( Kannada News Today ) : ಉತ್ತರ ಪ್ರದೇಶ ರಸ್ತೆ ಅಪಘಾತ : ಉತ್ತರ ಪ್ರದೇಶದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಪಿಲಿಭಿತ್ ಮತ್ತು ಕುಶಿನಗರ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೂ 32 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಶನಿವಾರ ಮುಂಜಾನೆ 3 ರಿಂದ 4 ರ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಲಿಭಿತ್ ಪೊಲೀಸ್ ಅಧೀಕ್ಷಕ ಜೈ ಪ್ರಕಾಶ್ ಪ್ರಕಾರ, ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 40 ಮತ್ತು ಬೊಲೆರೊದಲ್ಲಿ 10 ಪ್ರಯಾಣಿಕರು ಇದ್ದರು ಎನ್ನಲಾಗಿದೆ.

ಅಪಘಾತದ ಸಮಯದಲ್ಲಿ ಬೊಲೆರೊ ಚಾಲಕ ನಿದ್ರೆಗೆ ಜಾರಿದ್ದಾನೆ ಎಂಬ ಮಾಹಿತಿ ದೊರೆತಿದೆ ಎನ್ನಲಾಗಿದೆ, ಆದರೆ, ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.

Scroll Down To More News Today