Singhu border murder case: ಆರೋಪಿಗೆ ಏಳು ದಿನಗಳ ಪೊಲೀಸ್ ಕಸ್ಟಡಿ

ಸಿಂಘು ಗಡಿ ಹತ್ಯೆ ಪ್ರಕರಣದ (Singhu border murder case) ಆರೋಪಿಯನ್ನು ಸ್ಥಳೀಯ ನ್ಯಾಯಾಲಯ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಶುಕ್ರವಾರ ಸಂಜೆ ಆರೋಪಿಯನ್ನು ಬಂಧಿಸಿದ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನವದೆಹಲಿ: ಸಿಂಘು ಗಡಿ ಹತ್ಯೆ ಪ್ರಕರಣದ (Singhu border murder case) ಆರೋಪಿಯನ್ನು ಸ್ಥಳೀಯ ನ್ಯಾಯಾಲಯ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಂಜೆ ಆರೋಪಿಯನ್ನು ಬಂಧಿಸಿದ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿಂಘು ಗಡಿಯ ಬಳಿ ಶುಕ್ರವಾರ ಬೆಳಿಗ್ಗೆ ರೈತರು ಆಂದೋಲನ ಮಾಡುತ್ತಿದ್ದ ಸ್ಥಳದ ಬಳಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಆತನ ಎರಡೂ ಕಾಲುಗಳು ಮತ್ತು ತೋಳುಗಳನ್ನು ಕತ್ತರಿಸಲಾಗಿದ್ದು ಮತ್ತು ಆತನ ಮುಂಡವು ಹೋರ್ಡಿಂಗ್‌ನಲ್ಲಿ ನೇತಾಡುತ್ತಿರುವುದನ್ನು ನೋಡಿ ಸ್ಥಳೀಯರು ಗಾಬರಿಗೊಂಡರು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅವರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆರೋಪಿಯನ್ನು ಸರ್ವಜೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಸೋನಿಪತ್ ನ ಕುಂಡ್ಲಿ ಪ್ರದೇಶದಿಂದ ಬಂಧಿಸಲಾಗಿದೆ. ಮೃತ ವ್ಯಕ್ತಿಯನ್ನು 36 ವರ್ಷದ ಲಖ್ ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಪಂಜಾಬ್ ನ ಟಮ್ ಟರನ್ ಜಿಲ್ಲೆಯ ನಿವಾಸಿ.