ಕೃಷಿ ಕಾನೂನು ರದ್ದು ಮಾಡಿ.. ಸಂಸತ್ ಆವರಣದಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ

ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಪಕ್ಷ ಇಂದು ಒತ್ತಾಯಿಸಿದೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. 

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಪಕ್ಷ ಇಂದು ಒತ್ತಾಯಿಸಿದೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಂಸತ್ತಿನ ಪ್ರಾಂಗಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಕಪ್ಪು ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಬೃಹತ್ ಬ್ಯಾನರ್ ಹಿಡಿದು ಧರಣಿ ನಡೆಸಲಾಯಿತು. ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭವಾಗಿರುವುದು ಗೊತ್ತಿರುವ ವಿಚಾರ.

ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸೋನಿಯಾ, ರಾಹುಲ್ ಗಾಂಧಿಸೇರಿದಂತೆ ಪ್ರತಿಭಟನೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಹ ಭಾಗವಹಿಸಿದ್ದರು.

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಸಂಸದರು ಸೋಮವಾರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಒಮ್ಮತ ಮೂಡಿಸಲು ಖರ್ಗೆ ಅವರು ಕರೆದಿದ್ದ ಸಭೆಯಲ್ಲಿ ಇದಕ್ಕೂ ಮುನ್ನ ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

Stay updated with us for all News in Kannada at Facebook | Twitter
Scroll Down To More News Today