Video: ಮಹಿಳೆ ಕೂದಲೆಳೆ ಅಂತರದಲ್ಲಿ ಪಾರು; ವೇಗವಾಗಿ ಬಂದ ಸ್ವಿಫ್ಟ್ ಕಾರು ನಿಂತಿದ್ದ ಜೀಪ್‌ಗೆ ಡಿಕ್ಕಿ

Viral Video: ರಸ್ತೆಯಲ್ಲಿ ಫೋನ್ ಮಾತನಾಡುತ್ತಾ ಹೋಗುತ್ತಿದ್ದ ಮಹಿಳೆ ಎದುರಿನಿಂದ ವೇಗವಾಗಿ ಬಂದ ಕಾರು ಕಂಡು ಬೆಚ್ಚಿಬಿದ್ದಿದ್ದಾಳೆ. ಪ್ರಾಣ ಉಳಿಸಿಕೊಳ್ಳಲು ಪಕ್ಕಕ್ಕೆ ಓಡಿದರೂ, ಕ್ಷಣಾರ್ಧದಲ್ಲಿ ನಡೆದ ಅಪಘಾತದಲ್ಲಿ ಜೀಪ್ ಆಕೆಯ ಕಡೆಗೆ ನುಗ್ಗಿದೆ.

Viral Video: ರಸ್ತೆಯಲ್ಲಿ ಆರಾಮವಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕ್ಷಣಾರ್ಧದಲ್ಲಿ ಭೀಕರ ಅಪಘಾತ ಎದುರಾಗಿದೆ. ಎದುರಿನಿಂದ ನಿಯಂತ್ರಣ ತಪ್ಪಿ ವೇಗವಾಗಿ ಬಂದ ಕಾರನ್ನು ಕಂಡು ಆಕೆ ಪ್ರಾಣ ಉಳಿಸಿಕೊಳ್ಳಲು ಪಕ್ಕಕ್ಕೆ ಓಡಿದ್ದಾಳೆ. ಆದರೆ ಕಾರು ನಿಂತಿದ್ದ ಜೀಪ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ವಾಹನವೇ ಗಾಳಿಯಲ್ಲಿ ಹಾರಿದ್ದು, ಮಹಿಳೆಗೂ ಗಂಭೀರ ಗಾಯಗಳಾಗಿವೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಗಮನ ಸೆಳೆಯುತ್ತಿದೆ.

ಹಿಮಾಚಲ ಪ್ರದೇಶದ (Himachal Pradesh) ಸೋಲನ್ ಜಿಲ್ಲೆಯ ದಾತೌವಾಲ್ ಪ್ರದೇಶದಲ್ಲಿ ನವೆಂಬರ್ 14ರಂದು ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಜೀಪ್‌ನ ಮುಂಭಾಗದಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ಬರುತ್ತಿದ್ದಳು. ಇದೇ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಸ್ವಿಫ್ಟ್ ಕಾರು (Swift Car) ಅವರತ್ತ ಬರುತ್ತಿರುವುದನ್ನು ಗಮನಿಸಿದ್ದಾರೆ.

ಕಾರು ಕಂಡು ಪಕ್ಕಕ್ಕೆ ಓಡಿದ ಮಹಿಳೆ!

ಕಾರಿನ ವೇಗ ನೋಡಿದ ಮಹಿಳೆಗೆ ಅಪಾಯದ ಅರಿವಾಗಿದೆ. ತಕ್ಷಣವೇ ಅಲ್ಲಿಂದ ತಪ್ಪಿಸಿಕೊಳ್ಳಲು ಪಕ್ಕಕ್ಕೆ ಓಡಿದ್ದಾರೆ. ಆದರೆ ಅಷ್ಟರಲ್ಲೇ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಜೀಪ್‌ಗೆ ಬಲವಾಗಿ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ಜೀಪ್ ಗಾಳಿಯಲ್ಲಿ ಮೇಲಕ್ಕೆ ಹಾರಿ ಪಲ್ಟಿಯಾಗಿದೆ.

ಜೀಪ್ ಹಾರಿಬಿದ್ದ ರಭಸಕ್ಕೆ ಅದರ ಸಮೀಪದಲ್ಲಿದ್ದ ಮಹಿಳೆಗೂ ಬಡಿದಿದೆ. ಕೆಲವೇ ಸೆಕೆಂಡುಗಳಲ್ಲಿ ನಡೆದ ಈ ಘಟನೆ ಎಷ್ಟು ಭೀಕರವಾಗಿತ್ತು ಎಂಬುದು ಸಿಸಿಟಿವಿ ದೃಶ್ಯಗಳನ್ನು ನೋಡಿದರೆ ಅರ್ಥವಾಗುತ್ತದೆ.

ಮಹಿಳೆಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಅಪಘಾತದ ಸದ್ದು ಕೇಳುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದಾರೆ. ಗಾಯಗೊಂಡಿದ್ದ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಅಥವಾ ಬೇರೆ ಯಾವುದಾದರೂ ಅಂಶವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಇನ್ನೊಂದೆಡೆ, ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Footage) ದಾಖಲಾಗಿದೆ. ವೇಗವಾಗಿ ಬಂದ ಕಾರು ಜೀಪ್‌ಗೆ ಡಿಕ್ಕಿ ಹೊಡೆಯುವುದು, ಜೀಪ್ ಗಾಳಿಯಲ್ಲಿ ಹಾರುವುದು ಸೇರಿದಂತೆ ಅಪಘಾತದ ಭೀಕರತೆ ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯ ಇದೀಗ ಅಂತರ್ಜಾಲದಲ್ಲಿ ಹರಿದಾಡುತ್ತಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories