ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿಯಿಂದ ಪುಣೆಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸಂಜೆ 6:30ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಅಪರಿಚಿತರು ಕರೆ ಮಾಡಿದ್ದಾರೆ.

ನವದೆಹಲಿ: ದೆಹಲಿಯಿಂದ ಪುಣೆಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸಂಜೆ 6:30ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಅಪರಿಚಿತರು ಕರೆ ಮಾಡಿದ್ದಾರೆ. ಇದರಿಂದಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ತುರ್ತಾಗಿ ವಿಮಾನವನ್ನು ನಿಲ್ಲಿಸಿದ್ದಾರೆ.

ಬ್ರೇಕಿಂಗ್ ನ್ಯೂಸ್ Headlines 13 ಜನವರಿ 2023 06:33 am

ನಂತರ ಬಾಂಬ್ ಸ್ಕ್ವಾಡ್ ಮತ್ತು ಏರ್‌ಲೈನ್ ಅಧಿಕಾರಿಗಳು ಒಟ್ಟಾಗಿ ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಿದರು. ವಿಮಾನದಲ್ಲಿ ಯಾವುದೇ ಬಾಂಬ್ ಇರಲಿಲ್ಲ ಎಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Spicejet Flight Being Searched After Call Claims Bomb Threat

Follow us On

FaceBook Google News