ತಿರುಪತಿ ಕಾಲ್ತುಳಿತ ಘಟನೆಯಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಮಂದಿಗೆ ಗಾಯ
Tirupati Stampede: ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಬುಧವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಆಂಧ್ರ ಪ್ರದೇಶದ ತಿರುಪತಿ ನಗರವು ತೀವ್ರ ಆಘಾತಕ್ಕೀಡಾಗಿದೆ. ಈ ದುರ್ಘಟನೆ ಯಿಂದಾಗಿ ಮೃತಪಟ್ಟವರ ಸಂಖ್ಯೆ ಈಗಾಗಲೇ 6ಕ್ಕೆ ಏರಿಕೆಯಾಗಿದೆ.
Tirupati Stampede: ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಬುಧವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಆಂಧ್ರ ಪ್ರದೇಶದ ತಿರುಪತಿ ನಗರವು ತೀವ್ರ ಆಘಾತಕ್ಕೀಡಾಗಿದೆ. ಈ ದುರ್ಘಟನೆ ಯಿಂದಾಗಿ ಮೃತಪಟ್ಟವರ ಸಂಖ್ಯೆ ಈಗಾಗಲೇ 6ಕ್ಕೆ ಏರಿಕೆಯಾಗಿದೆ. ಘಟನೆಯ ನಂತರ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರಿಗೆ ವೈಕುಂಠ ದ್ವಾರ ಸರ್ವದರ್ಶನ ಟೋಕನ್‌ಗಳನ್ನು ವಿತರಿಸುವ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಶುಕ್ರವಾರದಿಂದ 10 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಭಕ್ತರು ವಿಭಿನ್ನ ಪ್ರದೇಶಗಳಿಂದ ತಿರುಪತಿಗೆ ಆಗಮಿಸುತ್ತಿದ್ದಾರೆ. ಆದರೆ ಬುಧವಾರ ಸಂಜೆ ಟೋಕನ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.
ಘಟನೆಯಲ್ಲಿ ಒಟ್ಟು 20 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಚಿಕಿತ್ಸೆಯನ್ನು ತಕ್ಷಣ ಪ್ರಾರಂಭಿಸಲಾಗಿದೆ.
ಟಿಟಿಡಿ ಆಡಳಿತವು ಗುರುವಾರದಿಂದ ತಿರುಪತಿಯ 9 ಕಡೆಗಳಲ್ಲಿ 94 ಕೌಂಟರ್‌ಗಳನ್ನು ತೆರೆಯಲು ಕ್ರಮ ಕೈಗೊಂಡಿದೆ.
ಈ ದುರ್ಘಟನೆಗೆ ಕಾರಣವೆಂದರೆ, ಟೋಕನ್ ವಿತರಣೆಯ ಸಮಯದಲ್ಲಿ ಭಕ್ತರಲ್ಲಿ ಒಬ್ಬರು ಅಸ್ವಸ್ಥಗೊಂಡಾಗ ಅವರಿಗಾಗಿ ಗೇಟ್ ತೆರೆಯಲಾಯಿತು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ಒಳಬಂದು ನೂಕುನುಗ್ಗಲು ಉಂಟಾಯಿತು. ಇದರಿಂದಾಗಿ ಭೀಕರ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
ಘಟನೆಯಾದ ನಂತರ ಸ್ಥಳದಲ್ಲಿ ಸಂತ್ರಸ್ತರಿಗಾಗಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಹೆಚ್ಚಿನ ಗಾಯಾಳುಗಳನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ಇನ್ನಷ್ಟೇ ಅಧಿಕಾರಿಗಳು ಬಿಡುಗಡೆ ಮಾಡಬೇಕಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.
Stampede at Tirupati Tirumala Temple, Six Dead, Several Injured