ಶಾಲಾ ಪ್ರಾಂಶುಪಾಲರನ್ನು ಗುಂಡಿಕ್ಕಿ ಕೊಂದ ವಿದ್ಯಾರ್ಥಿ ಬೈಕ್ ನಲ್ಲಿ ಪರಾರಿ

ಶಾಲೆಯ ಪ್ರಾಂಶುಪಾಲರನ್ನು ವಿದ್ಯಾರ್ಥಿಯೊಬ್ಬ ಗುಂಡಿಕ್ಕಿ ಕೊಂದಿದ್ದಾನೆ. ಬಳಿಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ.

ಭೋಪಾಲ್: ಶಾಲಾ ಪ್ರಾಂಶುಪಾಲರನ್ನು ಗುಂಡಿಕ್ಕಿ ಕೊಂದ ವಿದ್ಯಾರ್ಥಿ (Student Shoots Principal ) ನಂತರ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಗುಂಡಿನ ಸದ್ದಿಗೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯಭೀತರಾಗಿದ್ದರು.

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 55 ವರ್ಷದ ಸುರೇಂದ್ರ ಕುಮಾರ್ ಸಕ್ಸೇನಾ ಅವರು ಧಾಮೋರಾ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾಗಿ ಸುಮಾರು ಐದು ವರ್ಷಗಳಿಂದ ಶಾಲೆಯ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

12ನೇ ತರಗತಿ ವಿದ್ಯಾರ್ಥಿ ಶುಕ್ರವಾರ ಶಾಲೆಯ ಶೌಚಾಲಯಕ್ಕೆ ಹೋಗುತ್ತಿದ್ದಾಗ ಹಿಂಬಾಲಿಸಿ ಪ್ರಾಂಶುಪಾಲರ ತಲೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಬಳಿಕ ಆತ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಬೈಕ್‌ನಲ್ಲಿ ಅಲ್ಲಿಂದ ಪರಾರಿಯಾಗಿದ್ದಾನೆ.

ಶಾಲಾ ಪ್ರಾಂಶುಪಾಲರನ್ನು ಗುಂಡಿಕ್ಕಿ ಕೊಂದ ವಿದ್ಯಾರ್ಥಿ ಬೈಕ್ ನಲ್ಲಿ ಪರಾರಿ

ಯುಪಿಯಲ್ಲಿ ಒಂದೇ ದಿನ ಎರಡು ಮಾರಣಾಂತಿಕ ರಸ್ತೆ ಅಪಘಾತ, 12 ಮಂದಿ ಸಾವು

ಇದೇ ವೇಳೆ ಗುಂಡಿನ ಸದ್ದಿಗೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯಭೀತರಾಗಿದ್ದರು. ಪ್ರಾಂಶುಪಾಲರು ರಕ್ತದ ಮಡುವಿನಲ್ಲಿ ಸಾಯುವುದನ್ನು ನೋಡಿದ ಮಕ್ಕಳು ಹಾಗೂ ಸಹ ಶಿಕ್ಷಕರು ಏನಾಗುತ್ತಿದೆ ಎಂದು ಅರಿಯುವ ಮುನ್ನವೇ ಅವರ ಪ್ರಾಣ ಹಾರಿಹೋಗಿತ್ತು.

ಈ ಮಾಹಿತಿ ಪಡೆದ ಪೊಲೀಸರು ಶಾಲೆಗೆ ಆಗಮಿಸಿದ್ದಾರೆ. ಸುರೇಂದ್ರ ಕುಮಾರ್ ಸಕ್ಸೇನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತೊಂದೆಡೆ ಪೊಲೀಸರು ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಪ್ರಾಂಶುಪಾಲರ ಮೇಲೆ ಗುಂಡು ಹಾರಿಸಿದ ಬಳಿಕ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಓಡಿ ಹೋಗುತ್ತಿರುವುದು ಕಂಡು ಬಂದಿದೆ.

ಕಾರ್ ಟೈರ್ ಸಿಡಿದು ಕಾರು ಪಲ್ಟಿ, ಇಬ್ಬರು ಮಹಿಳೆಯರು ಸೇರಿ ಮೂವರು ಸಾವು

ಅಶಿಸ್ತಿನ ಇತಿಹಾಸ ಹೊಂದಿರುವ ಇಬ್ಬರು ವಿದ್ಯಾರ್ಥಿಗಳನ್ನು ಧಿಲಾಪುರ ಗ್ರಾಮದವರು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರನ್ನು ಬಂಧಿಸಲು ಯತ್ನಿಸಲಾಗುತ್ತಿದೆ ಎಂದಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Student Shoots Principal Dead In Madhya Pradesh Chhatarpur

Related Stories