ರಾಷ್ಟ್ರಪತಿ, ಪ್ರಧಾನಿ ಭೇಟಿ ಮಾಡಿದ ಸೂಪರ್‌ಸ್ಟಾರ್ ರಜಿನಿ ದಂಪತಿಗಳು

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ತಮ್ಮ ಪತ್ನಿ ಸಮೇತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ತಮ್ಮ ಪತ್ನಿ ಸಮೇತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಮೊದಲು ರಾಜ್ಯ ಭವನಕ್ಕೆ ತೆರಳಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ರಜನಿಕಾಂತ್ ಅವರನ್ನು ಅಭಿನಂದಿಸಿ ಅಭಿನಂದನೆ ಸಲ್ಲಿಸಿದರು. ಅನಂತರ ಅವರು ಪ್ರಧಾನಿ ನಿವಾಸಕ್ಕೆ ತೆರಳಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಕೂಡ ರಜನಿಕಾಂತ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಸೂಪರ್‌ಸ್ಟಾರ್ ರಜನಿಕಾಂತ್ ದಂಪತಿಗಳು
ಪ್ರಧಾನಿ ನರೇಂದ್ರ ಮೋದಿ ಹಾಗೂ ಸೂಪರ್‌ಸ್ಟಾರ್ ರಜನಿಕಾಂತ್ ದಂಪತಿಗಳು

ಈ ಎರಡು ಘಟನೆಗಳ ಫೋಟೋಗಳನ್ನು ರಜನಿಕಾಂತ್ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಮತ್ತು ಅಭಿನಂದನೆಗಳನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ ಎಂದು ರಜನಿಕಾಂತ್ ತಮ್ಮ ಟ್ವಿಟರ್ ಪೋಸ್ಟ್‌ಗೆ ಶೀರ್ಷಿಕೆಯನ್ನು ಸೇರಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ದಂಪತಿಗಳು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ದಂಪತಿಗಳು

ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರರಾಗಿ ಚಲನಚಿತ್ರೋದ್ಯಮಕ್ಕೆ ಅವರ ಸೇವೆಯನ್ನು ಗುರುತಿಸಿ, ಅವರಿಗೆ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಯಿತು.

Stay updated with us for all News in Kannada at Facebook | Twitter
Scroll Down To More News Today