ಅದಾನಿ ಹಿಂಡೆನ್‌ಬರ್ಗ್ ಕುರಿತು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ
ಅದಾನಿ ಗ್ರೂಪ್ ವಿರುದ್ಧ ಹಿಂಡನ್‌ಬರ್ಗ್ ಆರೋಪಗಳ ಕುರಿತು ತನಿಖೆ ನಡೆಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ನಡೆಸಲಿದೆ.
ಅದಾನಿ ಗ್ರೂಪ್ ವಿರುದ್ಧ ಹಿಂಡನ್‌ಬರ್ಗ್ ಆರೋಪಗಳ ಕುರಿತು ತನಿಖೆ ನಡೆಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ನಡೆಸಲಿದೆ. ಈ ಅರ್ಜಿಯ ವಿಚಾರಣೆಯನ್ನು ಇದೇ 17ರಂದು ನಡೆಸಲಾಗುವುದು ಎಂದು ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಬುಧವಾರ ತಿಳಿಸಿದೆ.
ಇದಕ್ಕೂ ಮುನ್ನ ಈ ಅರ್ಜಿಯನ್ನು ಇದೇ ತಿಂಗಳ 24ರಂದು ಪಟ್ಟಿ ಮಾಡಲು ಪೀಠ ಒಪ್ಪಿಗೆ ನೀಡಿತ್ತು.. ಇದೇ ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ಕುರಿತು ಸಲ್ಲಿಕೆಯಾಗಿರುವ ಇನ್ನೆರಡು ಅರ್ಜಿಗಳನ್ನು ಇದೇ ತಿಂಗಳ 17ರಂದು ಪಟ್ಟಿ ಮಾಡಲಾಗಿದೆ ಎಂಬ ಅಂಶವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದರು.
ಅದೇ ದಿನ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ಪೀಠ ಹೇಳಿದೆ. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ ಅದಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಅದಾನಿ ಎಂಟರ್ ಪ್ರೈಸಸ್ ನಲ್ಲಿ ಎಲ್ ಐಸಿ ಮತ್ತು ಎಸ್ ಬಿಐ ಹೂಡಿಕೆ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದರು.
Supreme Court To Hear Tomorrow On Adani Hindenburg
Follow us On
Google News |
Advertisement