India News
ವಿಮಾನದಲ್ಲಿ ತಾಂತ್ರಿಕ ದೋಷ, ಟೇಕಾಫ್ ಆದ ಸ್ವಲ್ಪ ಹೊತ್ತಿನಲ್ಲೇ ಲ್ಯಾಂಡಿಂಗ್ ಆದ ಏರ್ ಇಂಡಿಯಾ ವಿಮಾನ
Air India (Kannada News): ತಿರುವನಂತಪುರಂನಿಂದ ಒಮಾನ್‌ನ ಮಸ್ಕತ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನ ಲ್ಯಾಂಡಿಂಗ್ ಆಗಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ IX549 ಸೋಮವಾರ ಬೆಳಿಗ್ಗೆ 8:30 ಕ್ಕೆ ಕೇರಳದ ರಾಜಧಾನಿ ತಿರುವನಂತಪುರಂ ವಿಮಾನ ನಿಲ್ದಾಣದಿಂದ ಮಸ್ಕತ್‌ಗೆ ಹೊರಟಿತು. ಆದರೆ, ಹಾರಿದ ಸ್ವಲ್ಪ ಹೊತ್ತಿನಲ್ಲೇ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದನ್ನು ಪೈಲಟ್ ಗಮನಿಸಿದರು. ಬೆಳಿಗ್ಗೆ 9:17ಕ್ಕೆ ಅದೇ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿದೆ. ಆ ಸಮಯದಲ್ಲಿ ವಿಮಾನದಲ್ಲಿ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಇದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾದ ಪ್ರತಿನಿಧಿ ತಿಳಿಸಿದ್ದಾರೆ.
Technical Snag Forces Air India Express Flight To Return
Our Whatsapp Channel is Live Now 👇