ತೆಲಂಗಾಣ-ಆಂಧ್ರ ಅಂತರ್ ರಾಜ್ಯ ಬಸ್ ಸಂಚಾರ ಪುನರಾರಂಭ

ಕೊರೊನಾ ಸೋಂಕಿನಿಂದಾಗಿ ಸ್ಥಗಿತಗೊಂಡಿದ್ದ ಆಂಧ್ರಪ್ರದೇಶ-ತೆಲಂಗಾಣ ಅಂತಾರಾಜ್ಯ ಬಸ್ ಸಂಚಾರ ಇಂದಿನಿಂದ ಪುನರಾರಂಭಗೊಳ್ಳಲಿದೆ.

( Kannada News Today ) : ತೆಲಂಗಾಣ-ಆಂಧ್ರ ಅಂತರ್ ರಾಜ್ಯ ಬಸ್ ಸಂಚಾರ ಪುನರಾರಂಭ : ಕೊರೊನಾ ಸೋಂಕಿನಿಂದಾಗಿ ಸ್ಥಗಿತಗೊಂಡಿದ್ದ ಆಂಧ್ರಪ್ರದೇಶ-ತೆಲಂಗಾಣ ಅಂತಾರಾಜ್ಯ ಬಸ್ ಸಂಚಾರ ಇಂದಿನಿಂದ ಪುನರಾರಂಭಗೊಳ್ಳಲಿದೆ.

ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವಿನ ಬಸ್ ಸಂಚಾರ ಏಳು ತಿಂಗಳ ನಂತರ ಸೋಮವಾರ ಪುನಾರಾರಂಭವಾಗಿದೆ. ದೇಶಾದ್ಯಂತ ಅನ್‌ಲಾಕ್ ೧ ಜಾರಿಯಾದ ನಂತರ ಅಂತರರಾಜ್ಯ ಸಂಚಾರಕ್ಕೆ ಕೇಂದ್ರ ಸರ್ಕಾರ ಮುಕ್ತ ಅವಕಾಶ ಕಲ್ಪಿಸಿತ್ತು. ಅದರಂತೆ ಸೆಪ್ಟೆಂಬರ್‌ನಲ್ಲಿ ಟಿಎಸ್‌ಆರ್‌ಟಿಸಿ ಇತರ ರಾಜ್ಯಗಳಿಗೆ ಪ್ರಯಾಣಿಕರ ಸಾಗಣೆ ಪ್ರಾರಂಭ ಮಾಡಿತು.

ಆದರೆ ಆಂಧ್ರ ಪ್ರದೇಶ ಸರ್ಕಾರ ಅಂತರರಾಜ್ಯ ಬಸ್ ಸಂಚಾರಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಇದುವರೆಗೂ ಸಂಚಾರ ಆರಂಭವಾಗಿರಲಿಲ್ಲ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಉಭಯ ರಾಜ್ಯಗಳ ನಡುವೆ ಮತ್ತೆ ಬಸ್ ಸಂಚಾರ ಆರಂಭಿಸುವ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಟಿಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದಂತೆ ತೋರುತ್ತಿದೆ. ಕಳೆದ ೨೪ ಗಂಟೆಗಳಲ್ಲಿ ೪೫೨೩೦ ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದೊಂದು ದಿನಗಳಲ್ಲಿ ಕೊವಿಡ್-೧೯ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ.

ಒಂದು ದಿನದಲ್ಲಿ ೫೩,೨೮೫ ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ೪೯೬ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-೧೯ ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

Scroll Down To More News Today