India News
ಕಲಬುರಗಿ ಬಸ್ ಅಪಘಾತ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ, ತೆಲಂಗಾಣ ಸರ್ಕಾರ ಘೋಷಣೆ
ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ಸರಕು ಸಾಗಣೆ ವ್ಯಾನ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ತೆಲಂಗಾಣದ ಹೈದರಾಬಾದ್‌ನ ಮಕ್ಕಳು ಸೇರಿದಂತೆ ಏಳು ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.
15ಕ್ಕೂ ಹೆಚ್ಚು ಮಂದಿ ತೀವ್ರ ಸುಟ್ಟಗಾಯಗಳೊಂದಿಗೆ ಕಲಬುರಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ನೀಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಘೋಷಿಸಿದ್ದರು.
ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಖಾಸಗಿ ಬಸ್ ಬೆಂಕಿಗೆ ಆಹುತಿಯಾದವರ ಕುಟುಂಬಗಳಿಗೆ ತಲಾ 3 ಲಕ್ಷ ಹಾಗೂ ಗಾಯಾಳುಗಳ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಘೋಷಿಸಿದ್ದಾರೆ.
Telangana government announce 3 lakh relief for the families of Kalaburagi bus accident victims