ಕುಪ್ವಾರದಲ್ಲಿ ಉಗ್ರನ ಹತ್ಯೆ, ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ತಂಗ್‌ಧರ್ ಸೆಕ್ಟರ್‌ನಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಪಡೆಗಳು ಅನುಮಾನಾಸ್ಪದ ಚಲನವಲನಗಳನ್ನು ಗುರುತಿಸಿವೆ ಎಂದು ರಕ್ಷಣಾ ಮೂಲಗಳು ಹೇಳಿವೆ.

ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಲು ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಇದರಿಂದಾಗಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಪ್ರಾಣ ಕಳೆದುಕೊಂಡಿದ್ದು, ಪ್ರದೇಶವನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕುಪ್ವಾರದಲ್ಲಿ ಉಗ್ರನ ಹತ್ಯೆ, ಯೋಧ ಹುತಾತ್ಮ - Kannada News

terrorist killed jawan martyred in kupwara

Follow us On

FaceBook Google News