ಉಗ್ರರ ಗುಂಡಿನ ದಾಳಿ, ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮ
ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಹಾವಳಿ ಹೆಚ್ಚಾಗಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಗಸ್ತು ತಂಡದ ಮೇಲೆ ದಾಳಿ ನಡೆಸಿದಾಗ ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ.
ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಹಾವಳಿ ಹೆಚ್ಚಾಗಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಗಸ್ತು ತಂಡದ ಮೇಲೆ ದಾಳಿ ನಡೆಸಿದಾಗ ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದ ನಾಕಾ ಪಾಯಿಂಟ್‌ನಲ್ಲಿ ಈ ಘಟನೆ ನಡೆದಿದೆ.
ಗುಂಡಿನ ದಾಳಿಯಲ್ಲಿ ಸಬ್ ಇನ್ಸ್ ಪೆಕ್ಟರ್ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡೆಗಳು ಪ್ರದೇಶವನ್ನು ಸುತ್ತುವರಿದು ಪರಿಶೀಲನೆ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ತಿಂಗಳ 12 ರಂದು ಶ್ರೀನಗರದ ಲಾಲ್ಬಜಾರ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು.. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಎಎಸ್ಐ ಮುಷ್ತಾಕ್ ಅಹ್ಮದ್ ಹುತಾತ್ಮರಾಗಿದ್ದರು. ಘಟನೆ ನಡೆದು ಐದು ದಿನಗಳ ಬಳಿಕ ಮತ್ತೆ ಉಗ್ರರು ದಾಳಿ ನಡೆಸಿದ್ದಾರೆ.
ಈ ತಿಂಗಳ 11 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಜೈಶ್ ಎ ಮೊಹಮ್ಮದ್ ಟಾಪ್ ಕಮಾಂಡರ್ ಖೈಸರ್ ಕೋಕಾ ಕೂಡ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೋಕಾ ಹಲವಾರು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಿಗೆ ಬೇಕಾಗಿದ್ದನು.
terrorists attacked the naka team of police crpf in pulwama asi martyred
Follow us On
Google News |
Advertisement