ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 24 ಮಂದಿ ಸಾವು, ಸುಮಾರು 15 ಮಂದಿ ಅಸ್ವಸ್ಥ

Story Highlights

Spurious Liquor : ಬಿಹಾರ ರಾಜ್ಯದಲ್ಲಿ ನಕಲಿ ಮದ್ಯ ಮತ್ತೊಮ್ಮೆ ಸಂಚಲನ ಮೂಡಿಸುತ್ತಿದೆ, ಕಲಬೆರಕೆ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದಾರೆ.

Spurious Liquor : ಬಿಹಾರ ರಾಜ್ಯದಲ್ಲಿ (Bihar) ನಕಲಿ ಮದ್ಯ ಮತ್ತೊಮ್ಮೆ ಸಂಚಲನ ಮೂಡಿಸುತ್ತಿದೆ. ರಾಜ್ಯದ ಸರನ್ ಮತ್ತು ಸಿವಾನ್ ಜಿಲ್ಲೆಗಳಲ್ಲಿ ಕಲಬೆರಕೆ ಮದ್ಯ ಸೇವಿಸಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸಿವಾನ್ ಜಿಲ್ಲೆಯಲ್ಲಿ ಏಕಕಾಲಕ್ಕೆ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸಿವಾನ್ ಎಸ್ಪಿ ಅಮಿತೇಶ್ ಕುಮಾರ್ ಹೇಳಿದ್ದಾರೆ. ಸುಮಾರು 15 ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಪಾಟ್ನಾದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಮತ್ತೊಂದೆಡೆ, ಸರನ್ ಜಿಲ್ಲೆಯಲ್ಲಿ ಕಲಬೆರಕೆ ಮದ್ಯ ಸೇವಿಸಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಚಪ್ರಾ ಎಸ್ಪಿ ಕುಮಾರ್ ಆಶಿಶ್ ಹೇಳಿದ್ದಾರೆ. ಘಟನೆಯ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತೊಬ್ಬ ವ್ಯಕ್ತಿ ಪಾಣಿಪತ್ ನಲ್ಲಿ ಬಂಧನ

ಇದುವರೆಗೆ ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮೂವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

2016ರಲ್ಲಿ ಸಿಎಂ ನಿತೀಶ್ ಕುಮಾರ್ ಸರ್ಕಾರ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದ್ದು ಗೊತ್ತೇ ಇದೆ. ಆದರೆ, ಕಾಳಸಂತೆಯಲ್ಲಿ ಅಕ್ರಮ ಮದ್ಯ ಮಾರಾಟ ಮುಂದುವರಿದಿದೆ. ಕಲಬೆರಕೆ ಮದ್ಯ ಸೇವಿಸಿ ಜನರು ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ. ಪ್ರತಿ ವರ್ಷ ಹತ್ತಾರು ಮಂದಿ ಈ ಮದ್ಯ ಸೇವನೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

The death toll in Siwan, Bihar after consuming illicit liquor, rises to 20

Related Stories