ಡ್ರಗ್ಸ್ ಪ್ರಕರಣ: ನನ್ನ ಗಂಡನ ಜೀವಕ್ಕೆ ಅಪಾಯವಿದೆ, ಸಮೀರ್ ವಾಂಖೆಡೆ ಪತ್ನಿ

ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಆರ್ಯನ್ ಖಾನ್ ಬಿಡುಗಡೆಗೆ ಹಣದ ಬೇಡಿಕೆ ಇಟ್ಟಿದ್ದಾಗಿ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಅವರ ಪತ್ನಿ, ಮರಾಠಿ ನಟಿ ಕ್ರಾಂತಿ ರೆಡ್ಕರ್ ಪ್ರತಿಕ್ರಿಯಿಸಿದ್ದಾರೆ. 

ಮುಂಬೈ: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಆರ್ಯನ್ ಖಾನ್ ಬಿಡುಗಡೆಗೆ ಹಣದ ಬೇಡಿಕೆ ಇಟ್ಟಿದ್ದಾಗಿ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಅವರ ಪತ್ನಿ, ಮರಾಠಿ ನಟಿ ಕ್ರಾಂತಿ ರೆಡ್ಕರ್ ಪ್ರತಿಕ್ರಿಯಿಸಿದ್ದಾರೆ.

ಸಮೀರ್ ಪ್ರಾಮಾಣಿಕ, ಆದ್ದರಿಂದ ಅವರಿಗೆ ಶತ್ರುಗಳು ಇದ್ದಾರೆ. ಜನರು ಬಾಲಿವುಡ್ ಸೆಲೆಬ್ರಿಟಿಗಳ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಮತ್ತು ಅವರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಚಿವ ನವಾಬ್ ಮಲಿಕ್ ಮಾಡಿದ ಆರೋಪಗಳನ್ನು ಅವರು ನಿರಾಕರಿಸಿದರು.

ತನ್ನ ಪತಿ ಯಾವುದೇ ತಪ್ಪು ಮಾಡಿಲ್ಲ ಮತ್ತು ಅಂತಹ ಆರೋಪಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದರು. ತನ್ನ ಪತಿ ವಿರುದ್ಧದ ಎಲ್ಲಾ ಆರೋಪಗಳು ನಿರಾಧಾರ ಎಂದು ಅವರು ಹೇಳಿದ್ದಾರೆ. ಪ್ರ

ಕರಣದ ಪ್ರತ್ಯಕ್ಷ ಸಾಕ್ಷಿ ಪ್ರಭಾಕರ್ ನ್ಯಾಯಾಲಯಕ್ಕೆ ಯಾವುದೇ ಸಾಕ್ಷ್ಯಾಧಾರಗಳನ್ನು ಸಲ್ಲಿಸಿಲ್ಲ, ಹೇಳಿದ್ದನ್ನೇ…. ಕೇಳಿದ್ದೇನೆ… ಎಂಬ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ತನ್ನ ಗಂಡನ ಜೀವಕ್ಕೆ ಅಪಾಯವಿದೆ ಎಂದು ಅವರು ಹೇಳಿದರು.

ಸಮೀರ್ ವಾಂಖೆಡೆ ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಅನೇಕರು ಅವರನ್ನು ವೃತ್ತಿಯಿಂದ ಹೊರಗೆ ಕಳುಹಿಸಲು ಬಯಸಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today