ಪಾಕಿಸ್ತಾನ ಗೆಲುವಿಗೆ ಸಂಭ್ರಮಿಸಿದ ಕಾಶ್ಮೀರಿ ವಿದ್ಯಾರ್ಥಿಗಳು, ಸಸ್ಪೆಂಡ್

ಪಾಕಿಸ್ತಾನ ತಂಡದ ಗೆಲುವಿನ ಸಂಭ್ರಮ ವ್ಯಕ್ತಪಡಿಸಿದ ಕಾಶ್ಮೀರಿ ವಿದ್ಯಾರ್ಥಿಗಳು ... ಮೂವರನ್ನು ಕಾಲೇಜಿನಿಂದ ಅಮಾನತುಗೊಳಿಸಿದ್ದಾರೆ

ಆಗ್ರಾ (ಉತ್ತರ ಪ್ರದೇಶ): ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

ಆಗ್ರಾದ ರಾಜಾ ಬಲ್ವಂತ್ ಸಿಂಗ್ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಭಾನುವಾರ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರು. ಆಗ್ರಾ ಪೊಲೀಸರು ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮೂವರು ಪಾಕಿಸ್ತಾನದ ಪರ ಘೋಷಣೆಗಳನ್ನೂ ಕೂಗಿದ್ದಾರೆ ಎಂದು ಹಿಂದೂ ಸಂಘಟನೆಗಳ ಸದಸ್ಯರು ಆರೋಪಿಸಿದ್ದಾರೆ.

ಆಗ್ರಾದ ಜಗದೀಶಪುರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪಾಕಿಸ್ತಾನದ ವಿಜಯೋತ್ಸವ ಆಚರಿಸುತ್ತಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಘೋಷಣೆ ಕೂಗಿದರು.

ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಗದೀಶಪುರ ಪೊಲೀಸ್ ಠಾಣೆ ಪ್ರಭಾರಿ ಪ್ರವೀಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ದೇಶದಿಂದ ಹೊರಹಾಕಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.