ಹಾಸ್ಟೆಲ್‌ಗೆ ನುಗ್ಗಿದ ವಿಷಕಾರಿ ಹಾವು ಕಚ್ಚಿ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಸಾವು
ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕೋಚಿಂಗ್ ಸೆಂಟರ್‌ನ (Coaching Centre) ಹಾಸ್ಟೆಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ವಿದ್ಯಾರ್ಥಿಗಳು (Students) ಸಾವನ್ನಪ್ಪಿದ್ದಾರೆ.
ಮೂವರೂ ಅಪ್ರಾಪ್ತರು ಎನ್ನಲಾಗಿದ್ದು, ಅವರ ವಯಸ್ಸು 10 ರಿಂದ 12 ವರ್ಷ. ಭಾನುವಾರ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಮೂವರು ವಿದ್ಯಾರ್ಥಿಗಳು ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆಸ್ಪತ್ರೆಗೆ (Hospital) ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ (Coaching Centre Hostel) ನಡೆದ ಈ ಸಂಚಲನ ಘಟನೆ ಬಯಲಿಗೆ ಬಂದ ನಂತರ ಅಲ್ಲಿನ ವಿದ್ಯಾರ್ಥಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ಕಿಯೋಂಜಾರ್ ಜಿಲ್ಲೆಯ ಬರಿಯಾ ಪ್ರದೇಶದ ನಿಶ್ಚಿಂತ್‌ಪುರ ಗ್ರಾಮದ ಕೋಚಿಂಗ್ ಸೆಂಟರ್ ಹಾಸ್ಟೆಲ್‌ನ ನೆಲದ ಮೇಲೆ ನಾಲ್ವರು ವಿದ್ಯಾರ್ಥಿಗಳು ಮಲಗಿದ್ದಾಗ ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಲ್ಲಾ ನಾಲ್ವರು ವಿದ್ಯಾರ್ಥಿಗಳನ್ನು ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ಕರೆದೊಯ್ಯಲಾಯಿತು, ಅಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಅವರು ಹೇಳಿದರು. ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ರಾಜಾ ನಾಯಕ್ (12), ಶೆಹಶ್ರೀ ನಾಯಕ್ (11) ಮತ್ತು ಅಲೀನಾ ನಾಯಕ್ (12) ಎಂದು ಗುರುತಿಸಲಾಗಿದ್ದು, ಆಕಾಶ್ ನಾಯಕ್ (12) ಕಟಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Three Minor students killed after snake bite in Odisha Hostel
Follow us On
Google News |