Fire Cracker Godown: ತಮಿಳುನಾಡು ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ, ಇಬ್ಬರು ಸಾವು
Fire Cracker Godown – ಚೆನ್ನೈ: ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಬೆಂಕಿ ಅವಘಡದಿಂದ ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಪ್ರಸ್ತುತ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
Tamil Nadu | Two dead, one injured after a fire broke out at a firecracker godown near Nagarasampatti in Dharmapuri district. Fire tenders were rushed to the spot. Probe underway: Police
TN CM Stalin has announced an ex-gratia amount of Rs 3 lakhs each to families of deceased &…
— ANI (@ANI) March 16, 2023
ಮಾಹಿತಿ ಪ್ರಕಾರ, ಧರ್ಮಪುರಿ ಜಿಲ್ಲೆಯ ನಗರಸಂಪಟ್ಟಿ ಬಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಸ್ವಲ್ಪ ಸಮಯದಲ್ಲೇ ಬೆಂಕಿ ದೊಡ್ಡ ಸ್ವರೂಪ ಪಡೆದುಕೊಂಡು ಭೀಕರ ಬೆಂಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ಇನ್ನೂ ದೃಢಪಟ್ಟಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Two dead, one injured after a fire broke out at a firecracker godown near Nagarasampatti in Dharmapuri district Tamil Nadu