ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ, ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಘಟನೆ
ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಗುರುವಾರ ಬೆಳಗ್ಗೆ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದು ಪ್ರಯಾಗರಾಜ್ ರೈಲು ಹಳಿಯಲ್ಲಿ ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಗುರುವಾರ ಬೆಳಗ್ಗೆ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದು ಪ್ರಯಾಗರಾಜ್ ರೈಲು ಹಳಿಯಲ್ಲಿ ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಒಂದೇ ಹಳಿಯಲ್ಲಿ ಎರಡು ಗೂಡ್ಸ್ ರೈಲುಗಳು ಡಿಕ್ಕಿ ಹೊಡೆದು ಮುಂಜಾನೆ 5.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಗೂಡ್ಸ್ ರೈಲಿನ ಪೈಲಟ್ ಗಾಯಗೊಂಡಿದ್ದಾರೆ.
ವೇಗವಾಗಿ ಬಂದು ಸಂಭವಿಸಿದ ಡಿಕ್ಕಿಯಿಂದಾಗಿ ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದವು. ಆದರೆ, ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಹಳಿಗಳಿಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದೆ.
ಆ ಸ್ಥಳದಲ್ಲಿ ತೆರವು ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ಈ ಘಟನೆಯಿಂದಾಗಿ ಲಕ್ನೋ-ವಾರಣಾಸಿ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಹಲವು ರೈಲುಗಳ ಸಂಚಾರ ರದ್ದುಗೊಳಿಸಲಾಗಿದ್ದು, ಇತರ ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ.
Two Goods Trains Collide In Up Sultanpur
Uttar Pradesh | Collision between two goods trains leads to the derailment of wagons in Sultanpur; no casualties reported pic.twitter.com/z6UF9YWP8g
— ANI UP/Uttarakhand (@ANINewsUP) February 16, 2023
Follow us On
Google News |
Advertisement